Home News PUC Exam: ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹೊಸ ವಿದ್ಯಾರ್ಥಿಗಳ ನೋಂದಣಿ: ಪರೀಕ್ಷಾ ಮಂಡಳಿ ಮಹತ್ವದ...

PUC Exam: ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹೊಸ ವಿದ್ಯಾರ್ಥಿಗಳ ನೋಂದಣಿ: ಪರೀಕ್ಷಾ ಮಂಡಳಿ ಮಹತ್ವದ ಆದೇಶ

Open Book Exam

Hindu neighbor gifts plot of land

Hindu neighbour gifts land to Muslim journalist

PUC Exam: 2025-26ನೇ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಅರ್ಹ ಹೊಸ ವಿದ್ಯಾರ್ಥಿಗಳ ನೋಂದಣಿ ಮಾಹಿತಿಗಳ ಅನ್ವಯ ಮಂಡಲಿಯ ಪಿಯು ಎಕ್ಸಾಮ್‌ ಪೋರ್ಟಲ್‌ನಲ್ಲಿ ಯೋಜಿಸಲಾಗಿದೆ.

ರಾಜ್ಯದ ಎಲ್ಲಾ ಸರಕಾರಿ ಮತ್ತು ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಕಾಲೇಜಿನ 2025-26ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ತೆಗೆದುಕೊಳ್ಳುವ ಹೊಸ ವಿದ್ಯಾರ್ಥಿಗಳ ವಿವರಗಳನ್ನು ಕಡ್ಡಾಯವಾಗಿ ಆನ್‌ಲೈನ್‌ ಮೂಲಕ ಅಪ್ಲೋಡ್‌ ಮಾಡುವಂತೆ ಈ ಮೂಲಕ ಸೂಚಿಸಿದೆ.

1. 08-10-202500 31-10-2025 ಮಾಹಿತಿಯನ್ನು ಅಪ್ಲೋಡ್ ಮಾಡಲು ಕಾಲಾವಕಾಶವನ್ನು ನಿಗದಿಪಡಿಸಲಾಗಿದೆ.
2) ಮಾಹಿತಿಗಳನ್ನು ಮಂಡಲಿಯ ಜಾಲತಾಣದ https://kseeb.karnataka.gov.in ರಲ್ಲಿನ PU EXAM PORTAL ಕಾಲೇಜು ಲಾಗಿನ್ ಮುಖಾಂತರ ಅಪ್ಲೋಡ್ ಮಾಡುವುದು.
3) ಪ್ರಾಂಶುಪಾಲರು ಮಂಡಲಿಯ ಕಾಲೇಜು ಲಾಗಿನ್ ನಲ್ಲಿ ಈಗಾಗಲೇ ಸೃಜಿಸಲಾಗಿರುವ Username and Password ಬಳಸಿ ONLINE ನೋಂದಣಿ ಕಾರ್ಯ ಮಾಡಬಹುದಾಗಿದೆ.
4) ನೋಂದಣಿ ಕಾರ್ಯವನ್ನು ವಿದ್ಯಾರ್ಥಿಗಳ SATS NUMBER ಬಳಸಿ ಮಾಡುವುದು.
5) ಪ್ರತಿ ವಿದ್ಯಾರ್ಥಿಯ ಭಾವಚಿತ್ರವನ್ನು ಸ್ಕ್ಯಾನ್ ಮಾಡಿ ಭಾವಚಿತ್ರ (20-80kb) Jpeg, format ನಲ್ಲಿ ಅವರ SATS ನೋಂದಣಿ ಸಂಖ್ಯೆಯ ಅನುಕ್ರಮದಲ್ಲಿ ಸೇವ್ ಮಾಡಿಟ್ಟುಕೊಳ್ಳುವುದು. ಉದಾ:- ಅಭ್ಯರ್ಥಿಯ SATS ಸಂಖ್ಯೆಯು 12345678 ಆಗಿದ್ದಲ್ಲಿ ಭಾವಚಿತ್ರವನ್ನು ಸ್ಕ್ಯಾನ್ ಮಾಡಿ P12345678 ಎಂದು soft copy ಗಳನ್ನು ಸೇವ್ ಮಾಡಿಟ್ಟುಕೊಳ್ಳುವುದು.
6) ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಗಳ ಬಹುತೇಕ ಮಾಹಿತಿಗಳನ್ನು SATS ಡೇಟಾಬೇಸ್ ನಿಂದ ಪಡೆಯಲಾಗುವುದರಿಂದ ಅಭ್ಯರ್ಥಿಯ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜನ್ಮ ದಿನಾಂಕ, ಪ್ರವರ್ಗ, ಲಿಂಗ ಮತ್ತು ಮಾಧ್ಯಮ, ಸಂಯೋಜನೆ ಹಾಗೂ ವಿಷಯ ಇವುಗಳಲ್ಲಿ ಯಾವುದೇ ತಿದ್ದುಪಡಿಗಳು ಇದ್ದಲ್ಲಿ, ಮಂಡಲಿಯ ಜಾಲತಾಣದಲ್ಲಿ ನೇರವಾಗಿ ತಿದ್ದುಪಡಿ ಮಾಡಲು ಅವಕಾಶವಿರುವುದಿಲ್ಲ.

ಮೊದಲು SATS ಡೇಟಾಬೇಸ್ನಲ್ಲಿ ಶಾಲಾ ಶಿಕ್ಷಣ (ಪಿ.ಯು. ಇಲಾಖೆ) 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು-12 ಇಲ್ಲಿ ತಿದ್ದುಪಡಿ ಮಾಡಿಸಿದ ನಂತರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ PU EXAM PORTAL ಕಾಲೇಜು ಲಾಗಿನ್ನಲ್ಲಿ UPDATE LATEST DATA FROM SATS ಮಾಡಿದ ನಂತರ ಪರಿಷ್ಕೃತ ಮಾಹಿತಿಯನ್ನು ಪರಿಶೀಲಿಸಿ ತಾಳೆ ಹೊಂದಿದ ನಂತರ SUBMIT ಮಾಡುವುದು.
7) SATS ನಲ್ಲಿ ತಿದ್ದುಪಡಿ ಮಾಡಿಸುವಾಗ ಎಸ್.ಎಸ್.ಎಲ್.ಸಿ./10ನೇ ತರಗತಿ ಅಂಕಪಟ್ಟಿಯ ವಿವರಗಳ ಜೊತೆ ಪರಿಶೀಲಿಸುವುದು.