Moodabidre: ಅಪ್ರಾಪ್ತ ಬಾಲಕಿಯರ ಮೇಲೆ ಗ್ಯಾಂಗ್‌ ರೇಪ್‌ ಯತ್ನ; ನಾಲ್ವರು ಅರೆಸ್ಟ್‌

Share the Article

Mangaluru: ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಪುಸಲಾಯಿಸಿ, ಮನೆಯೊಂದಕ್ಕೆ ಕರೆದುಕೊಂಡು ಬಂದು ಗ್ಯಾಂಗ್‌ ರೇಪ್‌ ಮಾಡಲು ಯತ್ನ ಮಾಡುತ್ತಿದ್ದ ಸಂದರ್ಭ, ಮನೆ ಮೇಲೆ ಪೊಲೀಸರು ದಾಳಿ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ನಿಡ್ಡೋಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ದಾಳಿ ಸಂದರ್ಭ ನಾಲ್ವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಇಬ್ಬರು ಅಪ್ರಾಪ್ತ ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ಮಹೇಶ್‌ (30), ಯಜ್ಞೇಶ್‌ (25), ದಿಲೀಪ್‌ (25), ಶ್ರೀಕಾಂತ್‌ (25) ಬಂಧಿತ ಆರೋಪಿಗಳು.

ಖಚಿತ ಮಾಹಿತಿಯ ಆಧಾರದಲ್ಲಿ ಇನ್ಸ್‌ಪೆಕ್ಟರ್‌ ಸಂದೇಶ್‌ ನೇತೃತ್ವದ ತಂಡ ದಾಳಿ ಮಾಡಿದೆ. ಆರೋಪಿ ಮಹೇಶ್‌ ಎಂಬಾತ ಒಬ್ಬನೇ ಮನೆಯಲ್ಲಿ ವಾಸ ಮಾಡುತ್ತಿದ್ದು, ಆತನ ಮನೆಯಲ್ಲಿ ಈ ಕೃತ್ಯ ನಡೆಯುತ್ತಿತ್ತು ಎನ್ನಲಾಗಿದೆ. ಆರೋಪಿಗಳ ವಿರುದ್ಧ ಮೂಡಬಿದರೆ ಠಾಣೆಯಲ್ಲಿ ಪೋಕ್ಸೋ ಕೇಸು ದಾಖಲಾಗಿದೆ. ಆರೋಪಿಗಳು ವಿಚಾರಣೆ ಸಂದರ್ಭ ತಪ್ಪೊಪ್ಪಿಕೊಂಡಿರುವುದಾಗಿ ವರದಿಯಾಗಿದೆ.

Comments are closed.