Kambala: ಪೇಟಾ ಅರ್ಜಿ ವಿಚಾಣೆ: ವಿವಿಧೆಡೆ ಕಂಬಳಕ್ಕೆ ಅನುಮತಿ ಸರಕಾರಕ್ಕೆ ಬಿಟ್ಟ ಹೈಕೋರ್ಟ್

Kambala: ರಾಜ್ಯದ ಕೆಲ ಜಿಲ್ಲೆಗಳ ಅಥವಾ ನಿರ್ದಿಷ್ಠ ಭೌಗೋಳಿಕ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು ಇಡೀ ರಾಜ್ಯದ ಸಂಪ್ರದಾಯವಾಗಿರಲಿದೆ. ರಾಜ್ಯದ ವಿವಿಧೆಡೆ ಕಂಬಳ ಕ್ರೀಡೆ ಆಯೋಜನೆಗೆ ಅನುಮತಿಸುವ ವಿಚಾರದಲ್ಲಿ ಸರಕಾರ ಕಾನೂನು-ನಿಯಮಗಳಂತೆ ತೀರ್ಮಾನಿಸಬಹುದು ಎಂದು ಹೈಕೋರ್ಟ್ ಹೇಳಿದೆ.

ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳ ಸಾಂಪ್ರದಾಯಿಕ ಕಂಬಳ ಕ್ರೀಡೆಯನ್ನು ರಾಜ್ಯದ ಬೇರೆ ಜಿಲ್ಲೆ ಅಥವಾ ಭಾಗಗಳಲ್ಲಿ ಆಯೋಜಿಸಲು ನಿರ್ಬಂಧ ಹೇರುವಂತೆ ಸರಕಾರಕ್ಕೆ ನಿರ್ದೇಶಿಸಬೇಕು ಮತ್ತು ಪಿಲಿಕುಳ ನಿಸರ್ಗಧಾಮ ಉದ್ದೇಶಿತ ಕಂಬಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಪೇಟಾ ಸಂಸ್ಥೆ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತ್ತು.
ಇದರ ಕುರಿತು ಮಂಗಳವಾರ ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ, ಈ ಕುರಿತು ವಿಸ್ತೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದೆ.
ಸರ್ಕಾರ ವಿವರಣೆ ನೀಡಬೇಕು
ಮಾಸ್ಟರ್ ಪ್ಲಾನ್ ಯೋಜನೆಯಲ್ಲಿ ಪಿಲಿಕುಳ ನಿಸರ್ಗಧಾಮವನ್ನು ಜೈವಿಕ ಉದ್ಯಾನವನವೆಂದು ಗೊತ್ತುಮಾಡಿದ್ದರೆ, ಆ ಸ್ಥಳದಲ್ಲಿ ಕಂಬಳ ಆಯೋಜನೆಗೆ ಅವಕಾಶ ಇರುವುದಿಲ್ಲ. ಜೈವಿಕ ಉದ್ಯಾನವನ್ನು ‘ಹಬ್ಬದ ಮೈದಾನವಾಗಿ ಮಾಡಲಾಗದು. ಹಿಂದೆ ಪಿಲಿಕುಳ ನಿಸರ್ಗಧಾಮದಲ್ಲಿ ಕಂಬಳ ಕ್ರೀಡೆ ಆಯೋಜಿಸಬಹುದು ಎಂದು ತಜ್ಜರು ವರದಿ ನೀಡಿದ್ದಾರೆ. ಒಂದೊಮ್ಮೆ ಪಿಲಿಕುಳವು ಜೈವಿಕ ಉದ್ಯಾನವಾಗಿದ್ದರೆ, ತಜ್ಞರ ವರದಿಯೇ ತಪ್ಪಾಗಲಿದೆ. ಆದ್ದರಿಂದ ಪಿಲಿಕುಳದ ವಾಸ್ತವ ಸ್ಥಾನ-ಮಾನ ಬಗ್ಗೆ ಸರ್ಕಾರ ವಿವರಣೆ ನೀಡಬೇಕು. ಮುಂದಿನ ವಿಚಾರಣೆ ವೇಳೆ ಪಿಲಿಕುಳದಲ್ಲಿ ಕಂಬಳ ಆಯೋಜನೆಯ ವಿಷಯ ಪರಿಶೀಲಿಸಲಾಗುವುದು ಎಂದು ತಿಳಿಸಿದ ನ್ಯಾಯಪೀಠ, ವಿಚಾರಣೆಯನ್ನು ನ.11ಕ್ಕೆ ಮುಂದೂಡಿತು.
Comments are closed.