Eshwar Khandre : ರೈತರಿಗೆ ಸಿಹಿ ಸುದ್ದಿ – ಬೆಳೆ ಹಾನಿ ಪರಿಹಾರ ಬಿಡುಗಡೆಗೆ ದಿನಾಂಕ ಫಿಕ್ಸ್!!

Share the Article

 

Eshwar Khandre : ರಾಜ್ಯದಲ್ಲಿ ಉಂಟಾದ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದ ಬೆಳೆ ಹಾನಿಯಾಗಿದೆ. ಈ ಹಿನ್ನಲೆಯಲ್ಲಿ ರೈತರಿಗೆ ಸರ್ಕಾರ ಬೆಳೆ ಹಾನಿ ಪರಿಹಾರವನ್ನು ಬಿಡುಗಡೆ ಮಾಡಲು ದಿನಾಂಕ ಫಿಕ್ಸ್ ಮಾಡಿದೆ ಎಂದು ಪರಿಸರ ಮತ್ತು ಅರಣ್ಯ ಖಾತೆ ಸಚಿವರಾದ ಈಶ್ವರ ಖಂಡ್ರೆ ಅವರು ಮಾಹಿತಿ ನೀಡಿದ್ದಾರೆ.

 

ಹೌದು, ಧಾರಾಕಾರ ಮಳೆಯಿಂದಾಗಿ ರೈತರ ಬೆಳೆಗಳು, ಮನೆಗಳು, ರಸ್ತೆ ಹಾಗೂ ಜಾನುವಾರುಗಳಿಗೆ ಉಂಟಾದ ಭಾರೀ ಹಾನಿಯನ್ನು ಗಮನದಲ್ಲಿಟ್ಟುಕೊಂಡು, ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ರೂ. ಪರಿಹಾರವನ್ನು ಒಳಗೊಂಡಂತೆ ಒಟ್ಟು ₹300 ಕೋಟಿ ರೂ. ಪರಿಹಾರ ಮೊತ್ತವನ್ನು ಅಕ್ಟೋಬರ್ 30ರೊಳಗೆ ಪಾವತಿಸಲಾಗುವುದು ಎಂದು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಪತ್ತು ನಿರ್ವಹಣಾ ಸಭೆಯ‍ಲ್ಲಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಅಲ್ಲದೆ ಈಗಾಗಲೇ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ನಿಯಮದಂತೆ ₹170 ಕೋಟಿ ರೂ. ಪರಿಹಾರ ಪಾವತಿಸಲಾಗುತ್ತಿದ್ದು, ಉಳಿದ ಮೊತ್ತವನ್ನು ಕೂಡ ಅಕ್ಟೋಬರ್ 30ರೊಳಗೆ ವಿತರಿಸಲಾಗುವುದು.ಮನೆ ಹಾನಿ, ಬೆಳೆ ಹಾನಿ, ಜಾನುವಾರು ಹಾನಿ ಹಾಗೂ ಜೀವ ಹಾನಿಗೆ ದೀಪಾವಳಿಯೊಳಗೆ ಪರಿಹಾರ ನೀಡಲು ತಹಶೀಲ್ದಾರರು ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Comments are closed.