Karnataka Weather: ಕರಾವಳಿಯಲ್ಲಿ ನಾಳೆ ವರುಣಾರ್ಭಟ, ಎಲ್ಲೆಲ್ಲೆ ಮಳೆ?

Share the Article

Weather Forecast: ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, 23 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಮತ್ತು ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇರುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ವಿವಿಧೆಡೆ ನಾಳೆ ಉತ್ತಮ ಮಳೆಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ, ಕಾರ್ಕಳ ಮತ್ತು ಉಡುಪಿ ತಾಲೂಕಿನಲ್ಲಿ ಮಳೆ ಬೀಸಲಿದೆ.

Comments are closed.