Puttur: ಹೆಜ್ಜೇನು ದಾಳಿಯಿಂದ ಮೃತ ಬಾಲಕಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ-ಸಿಎಂ

Share the Article

Puttur: ಕೆಲಸ ದಿನಗಳ ಹಿಂದೆ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿಗೆ ಬಲಿಯಾಗಿದ್ದ ಬಾಲಕಿ ಇಶಾ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಕೊಂಬೆಟ್ಟು ಮೈದಾನದಲ್ಲಿ ನಡೆದ 13 ನೇ ವರ್ಷದ ಅಶೋಕ ಜನಮನ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡುತ್ತಿದ್ದ ವೇಳೆ ಅಶೋಕ್‌ ಕುಮಾರ್‌ ರೈ ಅವರ ಮನವಿಯಂತೆ 5 ಲಕ್ಷ ಪರಿಹಾರ ಘೋಷಣೆ ಮಾಡಿದರು.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ. ಪರಿಹಾರ ನೀಡಲು ಆದೇಶ ಮಾಡಿದ್ದು, ಹದಿನೈದು ದಿನಗಳೊಳಗೆ ಹಣ ಬರಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

 

Comments are closed.