Kodi Shri : ಸಿಎಂ ಬದಲಾವಣೆ ವಿಚಾರ- ಕೋಡಿ ಶ್ರೀಗಳಿಂದ ಅಚ್ಚರಿ ಭವಿಷ್ಯ!!

Share the Article

 

Kodi Shri : ರಾಜ್ಯ ರಾಜಕೀಯದ ಕುರಿತು ಆಗಾಗ ಆಶ್ಚರ್ಯ ಭವಿಷ್ಯಗಳನ್ನು ನಡೆಯುವ ಅರಸೀಕೆರೆ ತಾಲೂಕಿನ ಕೋಡಿಮಠದ ಶ್ರೀಗಳು ಇದೀಗ ಮತ್ತೆ ಸಿಎಂ ಬದಲಾವಣೆ ವಿಚಾರದ ಕುರಿತು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

 

ಹೌದು, ಹಾಸನ ಜಿಲ್ಲೆ ಅರಸೀಕೆರೆ ಹಾರನಹಳ್ಳಿ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ತಾವು ಹಿಂದೆ ನುಡಿದ ಭವಿಷ್ಯವನ್ನು ಮತ್ತೆ ಪುನರುಚ್ಚಾರ ಮಾಡಿದ್ದಾರೆ. ಹಾಲುಮತದವರ ಬಳಿ ಅಧಿಕಾರವಿದ್ದರೆ, ಅದನ್ನು ವಾಪಸ್ ತೆಗೆದುಕೊಳ್ಳುವುದು ತುಂಬಾ ಕಷ್ಟ. ಅವರಾಗಿಯೇ ಕೊಟ್ಟರೆ, ಬದಲಾಗಬಹುದೇ ಹೊರತು ಇಲ್ಲದಿದ್ದರೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯನವರೇ 5 ವರ್ಷ ಮುಂದುವರೆಯಲಿದ್ದಾರೆ. ಅವರಿಗೆ ಯಾವುದೇ ಕಂಟಕ ಇಲ್ಲ ಎಂದು ಹೇಳಿದ್ದಾರೆ.

 

ಛತ್ರಪತಿ ಶಿವಾಜಿ, ಸಂಗೊಳ್ಳಿ ರಾಯಣ್ಣ ಸಹ ಹಾಲುಮತ ಸಮುದಾಯದವರು. ಹಾಲುಮತ ಸಮಾಜದಲ್ಲಿ ಲೋಕೋತ್ತರ ಕಾಣಿಕೆಗಳು ಇವೆ. ಅವರಿಗೆ ದೈವಬಲ ಇದೆ ಎಂದು ಕೋಡಿಮಠ ಶ್ರೀಗಳು ಹೇಳಿದ್ದಾರೆ. ಕಳೆದ ಬಾರಿ 5 ವರ್ಷವಾದರೂ ಅವರನ್ನು ಏನೂ ಮಾಡಲು ಆಗಲಿಲ್ಲ. ಆದ್ದರಿಂದ ಹೇಳುತ್ತಿದ್ದೇನೆ, ಅವರಾಗಿಯೇ ಪದತ್ಯಾಗ ಮಾಡಬೇಕೇ ಹೊರತು ಬಲವಂತ ಮಾಡಲು ಸಾಧ್ಯವಿಲ್ಲ. ಹಾಲುಮತ ಸಮಾಜಕ್ಕೆ ಘನತೆ, ಗೌರವ ಇದೆ. ಅಧಿಕಾರ ಬಂದರೆ, ಹಿಂತೆಗೆದುಕೊಳ್ಳುವುದು ತುಂಬಾ ಕಷ್ಟ ಎಂದು ಹೇಳಿದ್ದಾರೆ.

Comments are closed.