Police: ರಾಜ್ಯದ ‘ಪೊಲೀಸ್ ಸಿಬ್ಬಂದಿ’ಯ ಆರೋಗ್ಯ ತಪಾಸಣಾ ವೆಚ್ಚ ಹೆಚ್ಚಳ

Share the Article

 

Police: ಕರ್ನಾಟಕ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ(siddaramaiah) ಹೇಳಿದರು.

ಇಂದು ಬೆಂಗಳೂರಿನ (Bangalore)ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಎಲ್ಲಾ ಪೊಲೀಸ್ (police) ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದರು.

Comments are closed.