Puttur: CM ಉಪಸ್ಥಿತಿಯಲ್ಲಿ ನೂಕುನುಗ್ಗಲು: ಕಾರಣ ಬಿಚ್ಚಿಟ್ಟ ಅಧಿಕಾರಿ

Puttur: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು (puttur) ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಅಶೋಕ ಜನಮನ-2025(Ashoka janamana) ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah ) ಭಾಗವಹಿಸಿದ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಅಸ್ವಸ್ಥರಾಗಿದ ಘಟನೆ ನಡೆದಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ಮಾಹಿತಿ ನೀಡಿದ್ದಾರೆ.

ವರಿಷ್ಠಾಧಿಕಾರಿ ಡಾ.ಕೆ. ಅರುಣ್ ನೀಡಿದ ಮಾಹಿತಿ ಪ್ರಕಾರ, “ಘಟನೆಯಲ್ಲಿ ಒಟ್ಟು 13 ಮಂದಿ ಅಸ್ವಸ್ಥರಾಗಿದ್ದರು. ಆದರೆ ಎಲ್ಲರೂ ಈಗ ಪೂರ್ಣ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಆಹಾರ ಮತ್ತು ಉಡುಗೊರೆ ವಿತರಣೆ ವಿಳಂಬವಾದ ಹಿನ್ನೆಲೆ, ಕೆಲವು ಮಹಿಳೆಯರು ಹೈಪೊಗ್ಲೈಸಿಮಿಯಾ ಅಥವಾ ನಿರ್ಜಲೀಕರಣದಿಂದ ಅಸ್ವಸ್ಥರಾಗಿದ್ದರು. ಕೆಲವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ. ಘಟನೆಯಲ್ಲಿ ಯಾರಿಗೂ ಗಂಭೀರವಾದ ಹಾನಿಯಾಗಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
“ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅಶೋಕ್ ರೈ ಅವರ ಟ್ರಸ್ಟ್ ವತಿಯಿಂದ ಜನರಿಗೆ ತಟ್ಟೆ ಮತ್ತು ವಸ್ತ್ರ ಹಂಚಿಕೆಯಾಗಿತ್ತು. ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದ್ದರು. ಆದರೆ ಕ್ರೀಡಾಂಗಣದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಆಗಮಿಸಿದ್ದರಿಂದ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ಉಸಿರಾಡಲು ಸಹ ತೊಂದರೆ ಉಂಟಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
Comments are closed.