Karnataka Rain: ಕರಾವಳಿಯಲ್ಲಿ ವರುಣಾರ್ಭಟ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

Karnataka Rain: ಕರ್ನಾಟಕದಲ್ಲಿ ಇಂದು ಭಾರೀ ಮಳೆಯಾಗುವ ಸಂಭವವಿದೆ. ಹವಾಮಾನ ಇಲಾಖೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿಯಲ್ಲಿ ಮಳೆ ಮುಂದುವರಿಯಲಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನದಲ್ಲಿ ಆರೆಂಜ್ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಘೊಷಿಸಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಪ್ರಮಾಣದ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆ ಜೊತೆ ಗಾಳಿಯ ವೇಗ ಹೆಚ್ಚಲಿರುವ ಕಾರಣ ಮುನ್ನೆಚ್ಚರಿಕೆಯ ಕ್ರಮವಾಗಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
Comments are closed.