Puttur: ಈಶ್ವರಮಂಗಲದಲ್ಲಿ ಗುಂಡಿನ ದಾಳಿ? ಗೋ ಪೂಜೆಯ ದಿನವೇ ಗೋ ಕಳ್ಳರಿಗೆ ಪೊಲೀಸರ ಶಾಕ್‌?

Share the Article

Puttur: ಅಕ್ರಮ ಗೋಸಾಗಾಟ ನಡೆಸುತ್ತಿದ್ದ ದುಷ್ಕರ್ಮಿಗಳಿಗೆ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್‌ ನೀಡಿದ್ದಾರೆ. ಪುತ್ತೂರು ತಾಲೂಕಿನ ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಎಂಬಲ್ಲಿ ಗೋಕಳ್ಳರ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿರುವ ಕುರಿತು ವರದಿಯಾಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಈತ ದೇಲಂಪಾಡಿ ನಿವಾಸಿ ಎಂದು ಗುರುತಿಸಲಾಗಿದೆ.

ವರದಿ ಪ್ರಕಾರ, ಗೋವುಗಳನ್ನು ಕದ್ದು ಸಾಗಿಸಲಾಗುತ್ತಿದ್ದು, ಈ ಕುರಿತು ಖಚಿತ ಮಾಹಿತಿಯನ್ನು ಪೊಲೀಸರ ತಂಡ ಬುಧವಾರ ಬೆಳಗಿನ ಜಾವ ಬೆಳ್ಳಿಚಡವು ಪ್ರದೇಶಕ್ಕ ತೆರಳಿತ್ತು. ಈ ವೇಳೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಪತ್ತೆಯಾಗಿದೆ. ಪೊಲೀಸರು ಅದನ್ನು ಹಿಂಬಾಲಿಸಲು ಆರಂಭ ಮಾಡಿದ್ದಾರೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಲಾರಿ ಚಾಲಕ, ಪೊಲೀಸ್‌ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ವರದಿಯಾಗಿದೆ. ಪೊಲೀಸರ ಮೇಲೂ ದಾಳಿಯನ್ನು ನಡೆಸಿದ್ದಾನೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಲಾರಿ ಚಾಲಕನಿಗೆ ತಗುಲಿ ಗಾಯವಾಗಿರುವುದಾಗಿ ವರದಿಯಾಗಿದೆ. ಇನ್ನೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಪೊಲೀಸ್‌ ಇಲಾಖೆ ಈ ಕುರಿತು ಯಾವುದೇ ಮಾಹಿತಿಯನ್ನು ಅಧಿಕೃತವಾಗಿ ಒದಗಿಸಿಲ್ಲ ಎನ್ನುವುದಾಗಿಯೂ ವರದಿಯಾಗಿದೆ.

Comments are closed.