Udupi: ಮಲ್ಪೆ: ಸಮುದ್ರಕ್ಕೆ ಬಿದ್ದು ವ್ಯಕ್ತಿ ಸಾವು!

Share the Article

Udupi: ಮಲ್ಪೆ ಬಂದರು ಪ್ರದೇಶದಲ್ಲಿ ಒಬ್ಬ ವ್ಯಕ್ತಿ ಆಕಸ್ಮಿಕವಾಗಿ ಬಂದರಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಘಟನೆಯ ನಂತರ ಸ್ಥಳೀಯ ಮೀನುಗಾರ ಈಶ್ವರ ಅವರು ಸಮುದ್ರದ ಅಲೆಗಳಲ್ಲಿ ತೇಲುತ್ತಿದ್ದ ಶವವನ್ನು ಪತ್ತೆಹಚ್ಚಿ ತೀರಕ್ಕೆ ತಂದಿದ್ದಾರೆ.

ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ ಶವವನ್ನು ವಶಪಡಿಸಿಕೊಂಡಿದ್ದಾರೆ. ಶವವನ್ನು ಪೋಸ್ಟ್‌ಮಾರ್ಟಂಗೆ ವ್ಯವಸ್ಥೆ ಮಾಡಲಾಗಿದೆ. ಮೃತರ ಗುರುತು ಇನ್ನಷ್ಟೇ ತಿಳಿದುಬರಬೇಕಾಗಿದೆ.

Comments are closed.