Hasana: ಹಾಸನ: ಕೆಂಡ ಹಾಯ್ದುು, ಭಕ್ತರ ಹೃದಯ ಗೆದ್ದ ಜಿಲ್ಲಾಧಿಕಾರಿ

Share the Article

Hasana: ಹಾಸನದ (Hasana) ಶಕ್ತಿ ದೇವತೆ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಗರ್ಭಗುಡಿ ಬಾಗಿಲು ಬಂದ್ ಮಾಡುವುದಕ್ಕೂ ಮುನ್ನ ಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡೋತ್ಸವ ಸಂಭ್ರಮದಿಂದ ಜರುಗಿತು.

ಈ ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಲತಾ ಕುಮಾರಿ ಸಹ ಕೆಂಡ ಹಾಯ್ದು ಭಕ್ತಿ ಭಾವ ಮೆರೆದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಕೆಂಡ ಸೇವೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಕಳಶ ಹೊತ್ತ ಭಕ್ತರು ಕೆಂಡ ಹಾಯ್ದಿದ್ದು ನೋಡಿ ನನಗೂ ಕೆಂಡ ಹಾಯುವ ಇಂಗಿತ ಬಂತು. ನಾನೆಂದೂ ಕೆಂಡ ಹಾಯ್ದಿರಲಿಲ್ಲ. ಮೊದಲಿಗೆ ಭಯ ಇತ್ತು. ಆದರೆ ದೇವರ ಮೇಲಿನ ಭಕ್ತಿಯಿಂದ ಕೈ ಮುಗಿದು ಹೋದೆ. ಏನೂ ಆಗಲಿಲ್ಲ ಎಂದು ಅವರು ನಂತರ ಅನುಭವ ಹಂಚಿಕೊಂಡರು.

Comments are closed.