Karnool Bus Fire: ಕರ್ನೂಲ್ ಬಸ್ ದುರಂತ: ಮೃತರಿಗೆ ತಲಾ 5 ಲಕ್ಷ, ಗಾಯಾಳುಗಳಿಗೆ 2 ಲಕ್ಷ ಪರಿಹಾರ ಘೋಷಣೆ

Karnool Bus Fire: ಆಂಧ್ರದ ಕರ್ನೂಲಿನಲ್ಲಿ (Karnool) ಗುರುವಾರ (ಅ.23) ಮಧ್ಯರಾತ್ರಿ 3ರ ಸುಮಾರಿಗೆ ಹೈದರಾಬಾದ್‌ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದು, 24 ಜನರು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ. ಈ ಕುರಿತು ಪಿಎಂ ಕಚೇರಿ (PMO) ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪಿಎಂ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ 50 ಸಾವಿರ ರೂ.

ಈ ಕುರಿತು ಆಂಧ್ರಪ್ರದೇಶ ಸಾರಿಗೆ ಸಚಿವ ರಾಮ್ ಪ್ರಸಾದ್ ರೆಡ್ಡಿ (Ram Prasad Reddy) ಮಾತನಾಡಿ, ಇದು ಹಳೆಯ ಬಸ್ ಆಗಿದ್ದ ಕಾರಣ ಇದರಲ್ಲಿ ಸ್ವಯಂಚಾಲಿತ ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇರಲಿಲ್ಲ ಎಂದು ಹೇಳಿದ್ದಾರೆ. ಜೊತೆಗೆ ಬಸ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Comments are closed.