Cricket: ಆಸ್ಟ್ರೇಲಿಯಾದ ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್‌

Share the Article

Cricket: ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್‌ನಲ್ಲಿ (ICC Women’s Worldcup) ಭಾಗವಹಿಸಲು ಆಗಮಿಸಿರುವ ಆಸ್ಟ್ರೇಲಿಯಾದ (Australia) ಇಬ್ಬರು ಮಹಿಳಾ ಕ್ರಿಕೆಟಿಗರಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಮಧ್ಯಪ್ರದೇಶದ (MadhyaPradesh0 ಇಂದೋರ್‌ನಲ್ಲಿ (Indore) ನಡೆದಿದೆ.

ಆರೋಪಿಯನ್ನು ಅಕಿಲ್ ಖಾನ್ ಎಂದು ಗುರುತಿಸಲಾಗಿದ್ದು, ಈ ಹಿಂದೆಯೂ ಆತನ ವಿರುದ್ಧ ಕೆಲವು ಕ್ರಿಮಿನಲ್ ಕೇಸ್‌ಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಗುರುವಾರ (ಅ.23) ಬೆಳಿಗ್ಗೆ ರಾಡಿಸನ್ ಬ್ಲೂ ಹೋಟೆಲ್‌ನಿಂದ ಕೆಫೆಯೊಂದಕ್ಕೆ ತಂಡ ಹೋಗುತ್ತಿದ್ದಾಗ ಖಜ್ರಾನಾ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ. ಮೋಟಾರ್ ಸೈಕಲ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಇಬ್ಬರು ಕ್ರಿಕೆಟಿಗರನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಯೊಬ್ಬರು ಆರೋಪಿಯ ಮೋಟಾರ್ ಸೈಕಲ್‌ನ ಸಂಖ್ಯೆಯನ್ನು ಗಮನಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಸದ್ಯ ಭಾರತೀಯ ನ್ಯಾಯ ಸಂಹಿತಾ (BNS) ಸೆಕ್ಷನ್ 74, 78ರ ಅಡಿಯಲ್ಲಿ ಎಂಐಜಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದೆ.

Comments are closed.