Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಗೆ ಹೈ ಅಲರ್ಟ್ ಘೋಷಣೆ

Share the Article

Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತವುಂಟಾಗಿದ್ದು, ಲಕ್ಷ ದ್ವೀಪದ ಸಮೀಪ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿರುಗಾಳ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಉಡುಪಿ (Udupi) ಜಿಲ್ಲೆಗೆ ಹೈ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಳ್ಳಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕಾ ಬೋಟ್ ಗಳು ಮಲ್ಪೆ ಬಂದರಿನತ್ತ ಮುಖ ಮಾಡಿವೆ.

Comments are closed.