Election: ದೇಶಾದ್ಯಂತ SIR: 10-15 ರಾಜ್ಯಗಳ ವೇಳಾಪಟ್ಟಿ ಇಂದು ಪ್ರಕಟ

Share the Article

Election: ದೇಶಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕೈಗೊಳ್ಳಲು ಕೇಂದ್ರ ಚುನಾವಣಾ ಆಯೋಗ (Election Commission Of India) ಸಿದ್ಧವಾಗಿದೆ. ಈ ನಿಟ್ಟಿನಲ್ಲಿ SIR ಕೈಗೊಳ್ಳುವ ಮೊದಲ 10-15 ರಾಜ್ಯಗಳ ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಿದೆ.

ಇಂದು ಸಂಜೆ 4.45ಕ್ಕೆ ಸುದ್ದಿಗೋಷ್ಠಿ ನಡೆಸಲಿದ್ದು, ಹಂತಹಂತವಾಗಿ ಎಸ್‌ಐಆರ್‌ ನಡೆಸುವ ರಾಜ್ಯಗಳ ಬಗ್ಗೆ ಮಾಹಿತಿ ನೀಡಲಿದೆ. ಪರಿಷ್ಕರಣೆಯು 2026 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಳು (Assembly Elections 2026) ಸೇರಿದಂತೆ 10 ರಿಂದ 15 ರಾಜ್ಯಗಳನ್ನು ಒಳಗೊಳ್ಳುವ ನಿರೀಕ್ಷೆಯಿದೆ.

Comments are closed.