Dharmasthala Case: ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಯಲ್ಲಿ ಕಾಲಾವಕಾಶ ನೀಡಿದ ಎಸ್‌ಐಟಿ

Dharmasthala Case: ಅ.27 ರಂದು ಐದು ಮಂದಿಗೆ ಎಸ್‌ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಸುಜಾತ ಭಟ್ ಅವರು ಮಾತ್ರ ಅ.27 ರಂದು ವಿಚಾರಣೆಗೆ ಹಾಜರಾಗಿದ್ದರು. ಉಳಿದ ನಾಲ್ಕು ಮಂದಿ ಗಿರೀಶ್ ಮಟ್ಟಣ್ಣನವರ್, ಸೌಜನ್ಯ ಮಾವ ವಿಠಲ್ ಗೌಡ, ಜಯಂತ್ ಟಿ, ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾಗದೆ ತಪ್ಪಿಸಿದ್ದರು.

ಅ.27 ರಂದು ಮಧ್ಯಾಹ್ನ ಬಂದ ನಾಲ್ಕು ಮಂದಿಯ ಪರ ವಕೀಲೆ ಅಂಬಿಕಾ ಪ್ರಭು ಎಸ್.ಐ.ಟಿ ವಿಚಾರಣೆಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದು, ಅದರಂತೆ ಅಧಿಕಾರಿಗಳು ಮಹೇಶ್ ಶೆಟ್ಟಿ, ತಿಮರೋಡಿಗೆ ಏಳು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ್ದು, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲ್ ಗೌಡರಿಗೆ ನಾಲ್ಕು ದಿನದ ಒಳಗಡೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಲಾಗಿದೆ ಎಂದು ವರದಿಯಾಗಿದೆ.
Comments are closed.