Ullala: ಹೆದ್ದಾರಿ ದಾಟುತ್ತಿದ್ದ ಪಾದಾಚಾರಿಗೆ ಲಾರಿ ಡಿಕ್ಕಿ: ಮದುವೆಗೆ ತೆರಳಿ ಹಿಂತಿರುಗುತ್ತಿದ್ದ ವ್ಯಕ್ತಿ ಸಾವು

Ullala: ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಹೆ ತೊಕ್ಕೊಟ್ಟು ಓವರ್ಬ್ರಿಡ್ಜ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಸೋಮೇಶ್ವರ ಗ್ರಾಮದ ಪಿಲಾರು ಸರಕಾರಿ ಶಾಲಾ ಬಳಿಯ ನಿವಾಸಿ ರಾಮಚಂದ್ರ ಬಿ (59) ಮೃತಪಟ್ಟ ವ್ಯಕ್ತಿ.
ಸೋಮವಾರ ಮದುವೆ ಸಮಾರಂಭವೊಂದನ್ನು ಮುಗಿಸಿ ಓವರ್ ಬ್ರಿಡ್ಜ್ ಬಸ್ ಸ್ಟಾಪ್ನಲ್ಲಿ ಉಳ್ಳಾಲದ ಬಸ್ಸಿನಿಂದ ಇಳಿದು ಹೆದ್ದಾರಿ ದಾಟುತ್ತಿದ್ದ ಸಂದರ್ಭ ಮಂಗಳೂರಿಗೆ ಹೋಗುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ರಾಮಚಂದ್ರ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸುವ ಸಂದರ್ಭ ದಾರಿಯಲ್ಲಿಯೇ ಸಾವಿಗೀಡಾಗಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಅಪಘಾತ ನಡೆಸಿದ ಲಾರಿ ಮತ್ತು ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ.
Comments are closed.