ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ 79ನೇ ಸ್ವಾತಂತ್ರ್ಯ ದಿನಾಚರಣೆ

Share the Article

ಸುಳ್ಯದ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಗಸ್ಟ್ 15 ರಂದು ಆಚರಿಸಲಾಯಿತು. ಆಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರು ಡಾ. ಕೆ ವಿ ಚಿದಾನಂದ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದರು.

ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಶ್ರೀ. ಚಂದ್ರಶೇಖರ್ ಪೇರಾಲ್, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇದರ ಪ್ರಾಂಶುಪಾಲರು ಡಾ. ಲೀಲಾಧರ್ ಡಿ. ವಿ., ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ವಿನಯ ಶಂಕರ್ ಭಾರಧ್ವಾಜ್ ಬಿ., ಸಂಸ್ಥೆಯ ಎನ್. ಎಸ್. ಎಸೊ. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ., ಹಾಗೂ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 14ರಂದು ಕಾಲೇಜಿನಲ್ಲಿ ಹರ್ ಘರ್ ತಿರಂಗ್ ಪ್ರತಿಜ್ಞಾವಿಧಿಯನ್ನು ತೆಗೆದುಕೊಳ್ಳಲಾಯಿತು

Comments are closed.