Rashtrotthana Sahitya: 37 ದಿನಗಳ ಕಾಲ ರಾಷ್ಟ್ರೋತ್ಥಾನ ಸಾಹಿತ್ಯದ ‘ಸಾಹಿತ್ಯ-ಸಂಸ್ಕೃತಿ ಉತ್ಸವ’

Rashtrotthana Sahitya: ಸಾಹಿತ್ಯಾಸಕ್ತರಿಗಾಗಿ ರಾಷ್ಟ್ರೋತ್ಥಾನ ಸಾಹಿತ್ಯವು (Rashtrotthana Sahitya) ನ.1ರಿಂದ ಡಿ.7 ರವರೆಗೆ 37 ದಿನಗಳ ಕಾಲ ಕನ್ನಡ ಪುಸ್ತಕ ಹಬ್ಬ (Book Fair) ನಡೆಸಲಿದೆ ಎಂದು ರಾಷ್ಟ್ರೋತ್ಥಾನ ಸಾಹಿತ್ಯದ ವಿಶ್ವಸ್ಥ ಕೆ.ಎಸ್. ನಾರಾಯಣ್ ತಿಳಿಸಿದ್ದಾರೆ.

`ಕನ್ನಡ ಪುಸ್ತಕ ಹಬ್ಬ’ದ 5ನೇ ಆವೃತ್ತಿ ನ.1ರಿಂದ ಡಿ.7ರ ವರೆಗೆ `ಕೇಶವಶಿಲ್ಪ’ ಸಭಾಂಗಣದಲ್ಲಿ ನಡೆಯಲಿದೆ. ನ.1 ಬೆಳಗ್ಗೆ 11 ಗಂಟೆಗೆ ಮೈಸೂರು ರಾಜವಂಶಸ್ಥರು, ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪುಸ್ತಕ ಹಬ್ಬವನ್ನು ಉದ್ಘಾಟಿಸಲಿದ್ದಾರೆ.
ಈ ಬಾರಿಯ 37 ದಿನಗಳ ಪುಸ್ತಕ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ನಡೆಯುವ ಪುಸ್ತಕ ಹಬ್ಬದಲ್ಲಿ ರಾಷ್ಟ್ರೋತ್ಥಾನ ಪ್ರಕಾಶನದ ಪುಸ್ತಕಗಳು ಮಾತ್ರವಲ್ಲದೇ, ಬೇರೆ ಬೇರೆ ಪ್ರಕಾಶಕರ ಪ್ರಮುಖ ಸಾಹಿತಿ-ಲೇಖಕರ ಪುಸ್ತಕಗಳು 10% ರಿಂದ 50% ವರೆಗಿನ ರಿಯಾಯಿತಿಯಲ್ಲಿ ದೊರೆಯಲಿವೆ.
ಪ್ರತಿದಿನ ಸಂಜೆ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ಈ ಬಾರಿ ಸುಮಾರು 10 ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕಾಲೇಜು ವಿದ್ಯಾರ್ಥಿಗಳಿಗಾಗಿ ಪ್ರಬಂಧ ಮತ್ತು ಚರ್ಚಾಸ್ಪರ್ಧೆ, ಶಾಲಾ ವಿದ್ಯಾರ್ಥಿಗಳಿಗಾಗಿ ಪುಸ್ತಕ ಪರಿಚಯ ಮತ್ತು ಲೇಖನ ಸ್ಪರ್ಧೆಗಳನ್ನು ಯೋಜಿಸಲಾಗಿದೆ.
ಮಕ್ಕಳಿಗಾಗಿ ಮಂಕುತಿಮ್ಮನ ಕಗ್ಗ ಹೇಳುವ ಸ್ಪರ್ಧೆ, ಕನ್ನಡ ಗದ್ಯ ಮತ್ತು ಪದ್ಯಭಾಗಗಳನ್ನು ತಪ್ಪಿಲ್ಲದೆ ಓದುವ ಸ್ಪರ್ಧೆ ಹಾಗೂ ಆಶುಭಾಷಣ ಸ್ಪರ್ಧೆಗಳು ನಡೆಯಲಿವೆ. ಇವುಗಳಿಗೆ ಉಚಿತ ಪ್ರವೇಶ ಇರುತ್ತದೆ.
Comments are closed.