RSS March: ರಾಜ್ಯ ಸರಕಾರಕ್ಕೆ ಹಿನ್ನೆಡೆ: RSS ಪಥ ಸಂಚಲನ ನಿರ್ಬಂಧ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

Share the Article

RSS March: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್‌ ಸರಕಾರಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಮಂಗಳವಾರ ನ್ಯಾಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.

10 ಜನಕ್ಕಿಂತ ಹೆಚ್ಚು ಜನ ಸೇರಿದರೆ ಅಕ್ರಮ ಕೂಟವೆಂದು ಪರಿಗಣಿಸಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನೀಡದೇ ಇರುವ ಸರಕಾರದ ಕ್ರಮ ಪ್ರಶ್ನೆ ಮಾಡಿ ಧಾರವಾಡ ಹೈಕೋರ್ಟ್‌ ಪೀಠಕ್ಕೆ ಸಂಸ್ಥೆ ರಿಟ್‌ ಅರ್ಜಿ ಸಲ್ಲಿಕೆ ಮಾಡಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯವು ರಾಜ್ಯಸರಕಾರ, ಗೃಹ ಇಲಾಖೆ, ಹುಬ್ಬಳ್ಳಿ ಕಮಿಷನರ್‌ಗೆ ನೋಟಿಸ್‌ ನೀಡಿದೆ.

ಕೋರ್ಟ್‌ ಹೇಳಿದ್ದೇನು?
2025 ರ ಅ.18 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಆರ್​ಎಸ್​​ಎಸ್ ಪ್ರಶ್ನಿಸಿತ್ತು. ಈ ವಿಚಾರವಾಗಿ ಸರ್ಕಾರಕ್ಕೆ ನೋಟಿಸ್ ನೀಡಿರುವ ಹೈಕೋರ್ಟ್ ಪೀಠ, ಅನುಮತಿಯಿಲ್ಲದೇ 10 ಜನ ಜನ ಸೇರಿದರೆ ಅಪರಾಧವೆಂದು ಸರ್ಕಾರದ ಆದೇಶದಲ್ಲಿದೆ. ರಸ್ತೆ, ಪಾರ್ಕ್, ಮೈದಾನ, ಕೆರೆ ಇತ್ಯಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಪೊಲೀಸ್ ಕಾಯ್ದೆಯಲ್ಲಿ ಇರುವ ಅಧಿಕಾರವನ್ನು ಸರ್ಕಾರ ಆದೇಶದ ಮೂಲಕ ಚಲಾಯಿಸಿದೆ. ಸಂವಿಧಾನದ ಆರ್ಟಿಕಲ್ 19 (1)A, B, ನೀಡಿರುವ ಹಕ್ಕನ್ನು ಸರ್ಕಾರ ಕಿತ್ತುಕೊಂಡಿದೆ. ಸಂವಿಧಾನ ನೀಡಿರುವ ಹಕ್ಕನ್ನು ಸರ್ಕಾರಿ ಆದೇಶ ಕಿತ್ತುಕೊಳ್ಳಲಾಗದು ಎಂದು ಅಭಿಪ್ರಾಯಪಟ್ಟಿದೆ.

Comments are closed.