Government Job: ಈ ಸಾಧನೆ ಮಾಡಿದವರಿಗೆ ಎ ಗ್ರೂಪ್‌ ಸರ್ಕಾರಿ ಹುದ್ದೆ: ಸಿದ್ದರಾಮಯ್ಯ

Share the Article

Government Job: ಕರ್ನಾಟಕದ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಸಾಮಾನ್ಯವಾಗಿ ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರದಿಂದ ಗೌರವಧನ ಸೇರಿದಂತೆ ವಿವಿಧ ಸವಲತ್ತುಗಳನ್ನು ನೀಡಲಾಗುತ್ತದೆ. ಅದರಂತೆ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದಿಂದ ಭಾರೀ ಸೌಕರ್ಯ ಸಿಗಲಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿನ ನ್ಯೂ ಉರ್ವ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್-ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ ಉದ್ಘಾಟನೆ ವೇಳೆ ಮಾತನಾಡಿದ್ದಾರೆ.

ಜನಸಂಖ್ಯೆಯಲ್ಲಿ ದೇಶ ನಂಬರ್ ಒನ್ ಆಗಿದೆ. ಒಲಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು ಎಂದಿದ್ದಾರೆ. ಈಗಾಗಲೇ ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್ ಸೇರಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದವರಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಎ ಗುಂಪಿನ ಹುದ್ದೆಗಳ ಜೊತೆಗೆ ಇತರೆ ಹುದ್ದೆಗಳನ್ನೂ (government job) ಮೀಸಲಿಟ್ಟಿದ್ದೇವೆ. ಡಿವೈಎಸ್‌ಪಿ ಸೇರಿ ಇತರೆ ಪೊಲೀಸ್ ಹುದ್ದೆಗಳಲ್ಲೂ ಶೇ. 2ರಷ್ಟಿದ್ದ ಹುದ್ದೆ ಮೀಸಲಾತಿಯನ್ನು ಶೇ. 3ಕ್ಕೆ ಹೆಚ್ವಿಸಿದ್ದೇನೆ.

ಜೊತೆಗೆ ಒಲಂಪಿಕ್‌ನಲ್ಲಿ ಪದಕ ತಂದು ರಾಜ್ಯದ, ರಾಷ್ಟ್ರದ ಕೀರ್ತಿ ಹೆಚ್ಚಿಸುವವರಿಗೆ 5 ಕೋಟಿ ರೂಪಾಯಿ ಬಹುಮಾನ ಘೋಷಿಸಿದ್ದೇನೆ. ಇನ್ನೂ ಅಗತ್ಯವಾದ ಅನುಕೂಲಗಳನ್ನೆಲ್ಲ ಮಾಡಿಕೊಡಲು ಸರ್ಕಾರ ಸಿದ್ಧವಿದೆ. ಒಟ್ಟಿನಲ್ಲಿ ನೀವು ಒಲಿಂಪಿಕ್‌ನಲ್ಲಿ ದೇಶಕ್ಕಾಗಿ ಪದಕ ತರಬೇಕು ಎಂದಿದ್ದಾರೆ.

Comments are closed.