RSS March: RSS ಅಂಕುಶ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್‌ ತಡೆಯಾಜ್ಞೆ; ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Share the Article

RSS March: ಆರ್‌ಎಸ್‌ಎಸ್‌ಗೆ ಅಂಕುಶ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹೊರಡಿಸಿದ್ದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಡೆಯಾಜ್ಞೆ ನೀಡಿದೆ. ಇದರಿಂದ ಸರಕಾರಕ್ಕೆ ಹಿನ್ನಡೆಯಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸೇರಿದಂತೆ ಯಾವುದೇ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಎಂದು ರಾಜ್ಯ ಸರಕಾರ ಹೊರಡಿಸಿದ ಆದೇಶ ಪ್ರಶ್ನೆ ಮಾಡಿ ಧಾರವಾಡ ಹೈಕೋರ್ಟ್‌ ಪೀಠಕ್ಕೆ ಪುನಶ್ಚೇತನ ಸೇವಾ ಸಂಸ್ಥೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್‌ನ ಸರಕಾರದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್‌ ತಡೆಯಾಜ್ಞೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಮೇಲ್ಮನವಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಧಾರವಾಡ ಹೈಕೋರ್ಟ್‌ ಪೀಠದ ತಡೆಯಾಜ್ಞೆ ತೆರವುಗೊಳಿಸುವಂತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದಿದ್ದಾರೆ.

Comments are closed.