BPL Card: ಆಹಾರ ಇಲಾಖೆಯಿಂದ ಪಡಿತರ ಚೀಟಿಗಳ ಪರಿಷ್ಕರಣೆ; ಬಿಪಿಎಲ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ

BPL Card: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷರು ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ.

ಮಡಿಕೇರಿ ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು.
ಬಿಪಿಎಲ್‌ನಿಂದ ಎಪಿಎಲ್‌ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ ಜಿಲ್ಲೆಯ ಅರ್ಹರು ಆಹಾರ ಇಲಾಖೆ ಅಥವಾ ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೇದಾರರಿಗೆ ಮನವಿ ಸಲ್ಲಿಸಬೇಕು. ಇದನ್ನು ಪರಿಶೀಲನೆ ಮಾಡಿ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ವಿತರಣೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಣೆ ಮಾಡಲು ಸರಕಾರ ಉದ್ದೇಶಿಸಿದೆ ಎಂದು ಅವರು ಹೇಳಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬದ ಹಲವು ಬಡವರಿಗೆ ಎಪಿಎಲ್ ಕಾರ್ಡ್‌ನ್ನು ನೀಡಲಾಗಿದ್ದು, ಬಡವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಬೇಕು. ಆ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Comments are closed.