Dharmasthala Case: ಧರ್ಮಸ್ಥಳ ತಲೆಬುರುಡೆ ಕೇಸ್: ತಿಮರೋಡಿ ಸೇರಿ ನಾಲ್ವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

Dharmasthala Mass Burial Case: ಧರ್ಮಸ್ಥಲ ತಲೆಬುರುಡೆ ಕೇಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ ಗೌಡರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಪ್ರಕರಣದ ತನಿಖೆಗೆ ನ.12 ರವರೆಗೆ ತಡೆ ನೀಡಿ ಆದೇಶ ನೀಡಿದೆ.

ಅರ್ಜಿದಾರರ ಪರ ವಾದ ಮಾಡಿದ ವಕೀಲ ಬಾಲನ್ ಅವರು ರಾಜಕೀಯ, ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದ ನೋಟಿಸ್ ನೀಡಲಾಗಿದೆ. ಈಗಾಗಲೇ 150 ಗಂಟೆಗೂ ಹೆಚ್ಚು ಕಾಲ ಅರ್ಜಿದಾರರ ವಿಚಾರಣೆ ನಡೆದಿದೆ. ಮೊದಲಿಗೆ 211(a) ಅಡಿ ಎಫ್‌ಐಆರ್ ದಾಖಲು ಮಾಡಿ ನಂತರ ಬೇರೆ ಸೆಕ್ಷನ್ ಸೇರಿಸಿದ್ದಾರೆ ಎಂದು ವಾದಿಸಿದ್ದಾರೆ.
ಎಸ್‌ಐಟಿ ಪರ ಎಸ್‌ಪಿಪಿ ಬಿ.ಎನ್.ಜಗದೀಶ್ ಅವರು, ಅರ್ಜಿದಾರರ ಪ್ರಚೋದನೆ ಮೇಲೆಯೇ ಚಿನ್ನಯ್ಯ ದೂರು ನೀಡಿದ್ದಾರೆ. ನಂತರ 164 ಹೇಳಿಕೆ ನೀಡಿ ಅರ್ಜಿದಾರರ ಮೇಲೆ ಆರೋಪ ಮಾಡಿದ್ದಾನೆ. ಈಗ ಆರೋಪಿಗಳನ್ನಾಗಿಸಿ ಇವರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.
ಆಗ ನ್ಯಾಯಾಲಯವು ಇಷ್ಟೊಂದು ನೋಟಿಸ್ ಕೊಟ್ಟಿರೋದು ಯಾಕೆ ಎಂದು ಪ್ರಶ್ನೆ ಮಾಡಿರುವ ಕೋರ್ಟ್, ಪ್ರತ್ಯೇಕ ಎಫ್‌ಐಆರ್ ದಾಖಲು ಮಾಡಬಹುದಿತ್ತಲ್ಲ ಎಂದು ಅಭಿಪ್ರಾಯಪಟ್ಟಿದೆ. ಇದಕ್ಕೆ ಎಸ್‌ಪಿಪಿ ಜಗದೀಶ್ ಅವರು, ದಾಖಲಿಸಿರುವ ಎಫ್‌ಐಆರ್ ನಲ್ಲೇ ತನಿಖೆ ಮುಂದುವರಿಸಬಹುದೆಂದು ಸುಪ್ರೀಂಕೋರ್ಟ್ ತೀರ್ಪಿದೆ. 35(3) ಅಡಿ ನೋಟಿಸ್ ಜಾರಿಗೊಂಡ ಬಳಿಕ ಅರ್ಜಿದಾರರು ಬಂದಿಲ್ಲ. ಈಗ ಹೊಸದಾಗಿ 35(3) ಅಡಿಯಲ್ಲಿ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದರು.
Comments are closed.