Home Breaking Entertainment News Kannada Kantara Film: ಕರ್ನಾಟಕ ರಾಜ್ಯೋತ್ಸವ – ಸಿನಿ ಪ್ರಿಯರಿಗಾಗಿ ‘ಕಾಂತಾರ ಚಾಪ್ಟರ್ 1’ ಸಿನಿಮಾ ಟಿಕೆಟ್...

Kantara Film: ಕರ್ನಾಟಕ ರಾಜ್ಯೋತ್ಸವ – ಸಿನಿ ಪ್ರಿಯರಿಗಾಗಿ ‘ಕಾಂತಾರ ಚಾಪ್ಟರ್ 1’ ಸಿನಿಮಾ ಟಿಕೆಟ್ ದರ ಇಳಿಕೆ

Hindu neighbor gifts plot of land

Hindu neighbour gifts land to Muslim journalist

Kantara Film: ರಿಷಬ್ ಶೆಟ್ಟಿ ನಟಿಸಿ, ತನ್ನ ನಿರ್ದೇಶನದಲ್ಲಿ ಮೂಡಿ ಬಂದ ಹಾಗೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಿದ ‘ಕಾಂತಾರ ಚಾಪ್ಟರ್ 1’ಚಿತ್ರ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಹಣ  ಎನಿಸಿಕೊಂಡಿದೆ. ಹಲವು ದಾಖಲೆಗಳನ್ನು ಬರೆದು, ಭಾರತದಾದ್ಯಂತ ತನ್ನ ಅಬ್ಬರವನ್ನು ಮುಂದುವರಿಸಿದೆ. ಇದೀಗ ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್‌ ಸಿನಿ ಪ್ರಿಯರಿಗೆ ಸಿಹಿ ಸುದ್ದಿ ನೀಡಿದೆ.

ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಹೊಂಬಾಳೆ ಫಿಲ್ಮ್ಸ್‌ ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಟಿಕೆಟ್ ದರಗಳನ್ನು ಇಳಿಸಿದೆ. ಸಿಂಗಲ್ ಸ್ಟ್ರೀನ್‌ನ ಟಿಕೆಟ್‌ ದರ ₹99, ಮಲ್ಟಿಪ್ಲೆಕ್ಸ್ ಟಿಕೆಟ್ ದರ ₹150 ನಿಗದಿಪಡಿಸಿದೆ. ಅಕ್ಟೋಬರ್ 2ರಂದು ತೆರೆಕಂಡ ಈ ಚಿತ್ರ ಕರ್ನಾಟಕದಲ್ಲಿಯೇ ₹250 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು, ಜಾಗತಿಕವಾಗಿ ₹850 ಕೋಟಿ ಗಳಿಸಿ ಈ ವರ್ಷ ಅತೀ ಹೆಚ್ಚು ಗಳಿಸಿದ ಭಾರತೀಯ ಸಿನಿಮಾ ಎನಿಸಿಕೊಂಡಿದೆ.

2022ರಲ್ಲಿ ತೆರೆಕಂಡ ʼಕಾಂತಾರʼ ಚಿತ್ರದ ಪ್ರೀಕ್ವೆಲ್‌ ಇದಾಗಿದ್ದು, ತನ್ನ ಮಣ್ಣಿನ ಕಥೆ, ಅದ್ಭುತ ದೃಶ್ಯ ವೈಭವ ಹಾಗೂ ಕಲಾವಿದರ ಅತ್ಯುತ್ತಮ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದಿದೆ. ರಿಲೀಸ್‌ ಆಗಿ 28 ದಿನ ಕಳೆದಿದ್ದು, ಈಗಲೂ ಹಲವು ಕಡೆಗಳಲ್ಲಿ ಹೌಸ್‌ಫುಲ್‌ ಪ್ರದರ್ಶನ ಕಾಣುತ್ತಿದೆ.