Karnataka Gvt : ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದೀರಾ? ಹಾಗಿದ್ದರೆ ಕ್ರಿಮಿನಲ್ ಕೇಸ್ ಫಿಕ್ಸ್

Share the Article

Karnataka Gvt : ಸರ್ಕಾರಿ ಜಮೀನನ್ನು ಹೊತ್ತುವರಿ ಮಾಡಿಕೊಂಡಿರುವ ವಿರುದ್ಧ ಕ್ರಿಮಿನಲ್ ಕೇಸ್ ವಿಧಿಸಲು ರಾಜ್ಯ ಸರ್ಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಹೌದು, ರಾಜ್ಯ ಸರ್ಕಾರ ಒತ್ತುವರಿ ಜಮೀನು ವಿಚಾರವಾಗಿ ಈ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ಜಿಲ್ಲೆ, ಯಲಹಂಕ ತಾಲ್ಲೂಕು, ಹೆಸರಘಟ್ಟ ಹೋಬಳಿ, ಸೊಣ್ಣೇನಹಳ್ಳಿ ಗ್ರಾಮದ ಸರ್ವೆ ನಂ.78 ರ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಸುಮಾರು 1.5 ಕಿ.ಮೀ ಉದ್ದದ ಡಾಂಬರು ರಸ್ತೆಯನ್ನು ತೆರವುಗೊಳಿಸಲಾಗಿದ್ದು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ತಿಳಿಸಿದ್ದಾರೆ.

ಇಂದು ಯಲಹಂಕ ತಹಶೀಲ್ದಾರ್ ಶ್ರೇಯಸ್.ಜಿ.ಎಸ್‌ ಮತ್ತು ಕಂದಾಯ ಅಧಿಕಾರಿ/ಸಿಬ್ಬಂದಿಗಳು ಹಾಗೂ ರಾಜಾನುಕುಂಟೆ ಪೊಲೀಸ್ ರವರ ಸಮಕ್ಷಮದಲ್ಲಿ ಸರ್ಕಾರಿ ಜಮೀನಿನಲ್ಲಿನ ಅನಧಿಕೃತ ಡಾಂಬರೀಕರಣದ ರಸ್ತೆಯನ್ನು ತೆರವುಗೊಳಿಸಿ, ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿರುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.