BCCI: ಮೊದಲ ಸಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ತಂಡಕ್ಕೆ BCCI ಕೊಡುವ ನಗದು ಬಹುಮಾನವೆಷ್ಟು?

BCCI: ಮುಂಬೈನ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ ಕ್ರಿಕೆಟ್ ನ ಫೈನಲ್ ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾದ ಮಹಿಳಾ ತಂಡವನ್ನು 52 ರನ್ ಗಳ ಅಂತರದಿಂದ ಸೋಲಿಸುವ ಮೂಲಕ ಚೊಚ್ಚಲ ವಿಶ್ವಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಬೆನ್ನಲ್ಲೇ ತಂಡಕ್ಕೆ ಪುರುಷರ ತಂಡಕ್ಕೆ ಸಮಾನವಾದ ನಗದು ಬಹುಮಾನವನ್ನ ನೀಡಲು ಬಿಸಿಸಿಐ ಯೋಜಿಸುತ್ತಿದೆ ಎನ್ನಲಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನವಿ ಮುಂಬೈನಲ್ಲಿ ಟ್ರೋಫಿಯನ್ನು ಎತ್ತಿ ಹಿಡಿದಿರುವ ಹರ್ಮನ್ಪ್ರೀತ್ ಕೌರ್ ನೇತೃತ್ವದ ತಂಡಕ್ಕೆ ಪುರುಷರ ತಂಡಕ್ಕೆ ಸಮಾನವಾದ ನಗದು ಬಹುಮಾನವನ್ನ ನೀಡಲು ಯೋಜಿಸುತ್ತಿದೆ. ಅಂದರೆ 2024ರ ಟಿ20 ವಿಶ್ವಕಪ್ ಗೆದ್ದ ಪುರುಷರ ತಂಡಕ್ಕೆ ನೀಡಲಾಗಿದ್ದ 125 ಕೋಟಿ ರೂಪಾಯಿ ಬಹುಮಾನವನ್ನು ಮಹಿಳಾ ತಂಡಕ್ಕೂ ನೀಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಒಂದು ಹೆಗ್ಗುರುತಾಗಿದೆ.
ಇನ್ನು “ಬಿಸಿಸಿಐ ಪುರುಷರು ಮತ್ತು ಮಹಿಳೆಯರಿಗೆ ಸಮಾನ ವೇತನವನ್ನು ಬೆಂಬಲಿಸುತ್ತದೆ, ಮತ್ತು ಆದ್ದರಿಂದ ನಮ್ಮ ಹುಡುಗಿಯರು ವಿಶ್ವಕಪ್ ಗೆದ್ದರೆ, ಪುರುಷರ ಜಾಗತಿಕ ಗೆಲುವಿಗೆ ಹೋಲಿಸಿದರೆ ಬಹುಮಾನವು ಕಡಿಮೆ ಏನನ್ನೂ ಹೊಂದಿರುವುದಿಲ್ಲ ಎಂಬ ಚರ್ಚೆಗಳು ನಡೆಯುತ್ತಿವೆ” ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Comments are closed.