Weather Report: ಕರ್ನಾಟಕ ಹವಾಮಾನ : ಹಗಲಿನ ಉಷ್ಣಾಂಶ ಕೊಂಚ ಏರಿಕೆ : ಕಾರಣ ಏನು?

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 6ರಿಂದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಳೆಯ ಮುನ್ಸೂಚೆನೆ ಒಂದೊಂದೇ ದಿನ ಮುಂದೆ ಸರಿಯುತ್ತಿದೆ.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 6ರಿಂದ ರಾಜ್ಯದ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.
ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಉತ್ತರ ಒಳನಾಡಿನ ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗುತ್ತಿದೆ.
ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನ ಅಲ್ಲಲ್ಲಿ ನವೆಂಬರ್ 4ರಿಂದ ಸಾಮಾನ್ಯ ಮಳೆ ಆರಂಭವಾಗುವ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು. ಆದರೆ ಉತ್ತರ ಭಾರತದ ಕಡೆಯಿಂದ ಛಳಿ ಗಾಳಿಯು ಬೀಸಲು ಆರಂಭವಾದರೆ ಮಳೆಯ ಸಾಧ್ಯತೆ ಕಡಿಮೆಯಾಗಬಹುದು.
Comments are closed.