CM Siddaramiah : ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಪದಕ ಗೆದ್ದವರಿಗೆ ಇನ್ನು ‘ಪೊಲೀಸ್ ಹುದ್ದೆ’ – ಸಿಎಂ ಸಿದ್ದರಾಮಯ್ಯ ಘೋಷಣೆ

Share the Article

CM Siddaramiah : ಪೊಲೀಸ್ ಇಲಾಖೆಗೆ ಸೇರಬಯಸುವವರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ (International sports) ಪದಕ ವಿಜೇತ (Medal winners) ಪಟುಗಳಿಗೆ ಪೊಲೀಸ್‌ ಇಲಾಖೆಯಲ್ಲಿ (Police department) ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ.

ಹೌದು, ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಪಟುಗಳಿಗೆ ಪೊಲೀಸ್‌ ಇಲಾಖೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳಲು ನಮ್ಮ ಸರ್ಕಾರ ನಿರ್ಧರಿಸಿದೆ. ಪೊಲೀಸ್‌ ಇಲಾಖೆಯಲ್ಲಿ ಶೇ.3 ರಷ್ಟು ಹುದ್ದೆಗಳು ಮತ್ತು ಇತರೆ ಇಲಾಖೆಗಳಲ್ಲಿ ಶೇ.2 ರಷ್ಟು ಹುದ್ದೆಗಳನ್ನು ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಮತ್ತು ರಾಜ್ಯ ಒಲಂಪಿಕ್ ಅಸೋಸಿಯೇಷನ್ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನ ನೀಡಲಾಗುತ್ತಿದೆ. ಚಿನ್ನ 10 ಲಕ್ಷ ರೂ. ಬೆಳ್ಳಿ 5 ಲಕ್ಷ ರೂ. ಮತ್ತು ಕಂಚು ಪದಕ ವಿಜೇತರಿಗೆ 2 ಲಕ್ಷ ರೂ. ನಗದು ನೀಡಲಾಗುತ್ತಿದೆ ಎಂದು ಹೇಳಿದರು.

ಇನ್ನು ಗೃಹ ಸಚಿವ ಪರಮೇಶ್ವರವರು ಮಾತನಾಡಿ ಸದ್ಯ ರಾಜ್ಯದಲ್ಲಿ ಪೇದೆ, ಪಿಎಸ್‌ಐ ನೇಮಕಾತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ನಮ್ಮಲ್ಲಿ ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ ಸುಮಾರು 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. ಹಾಗಾಗಿ ಈಗ 8500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದರು.

Comments are closed.