Siddaramaiah: ಅಕ್ರಮವಾಗಿ ರೆಸಾರ್ಟ್ ನಡೆಸುವವರ ವಿರುದ್ಧ ಕಾನೂನು ಕ್ರಮ: ಮುಖ್ಯಮಂತ್ರಿ

Share the Article

 

Siddaramaiah: ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ

ಪ್ರವಾಸಿಗರಿಗಾಗಿ ಕೈಗೊಳ್ಳುವ ಸಫಾರಿಗಳ ಸಂಖ್ಯೆಯನ್ನೂ ಕಡಿಮೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೆಸಾರ್ಟ್ ಗಳು ತಲೆ ಎತ್ತುತ್ತಿದ್ದು, ಸಫಾರಿಗಳು ಸೇರಿದಂತೆ ಜನರ ಸಂಚಾರ ಹೆಚ್ಚುತ್ತಿದೆ. ನೀರು ಮತ್ತು ಮೇವಿನ ಕೊರತೆ ಹಾಗೂ ಹುಲಿ, ಚಿರತೆಗಳ ಹಾವಳಿಯಿಂದ ಕಾಡು ಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಸಚಿವರು ಈಗಾಗಲೇ ಸಭೆ ನಡೆಸಿದ್ದು, ನನ್ನ ಅಧ್ಯಕ್ಷತೆಯಲ್ಲಿಯೂ ಸಭೆ ನಡೆಯಲಿದೆ. ಅಲ್ಲದೇ, ಅಕ್ರಮವಾಗಿ ರೆಸಾರ್ಟ್ ಗಳನ್ನು ನಡೆಸುತ್ತಿರುವವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

Comments are closed.