TET ಖಡ್ಡಾಯ ವಿಚಾರ – ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

TET: ಬಡ್ತಿ ಹಾಗೂ ಸೇವೆ ಮುಂದುವರಿಕೆಗೆ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪಿಗೆ ಕರ್ನಾಟಕದ ಹಲವು ಶಿಕ್ಷಕರು, ಶಿಕ್ಷಣ ತಜ್ಞರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಕುರಿತು ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿತ್ತು. ಈ ಕುರಿತಾಗಿ ಶಿಕ್ಷಕರು ಕಾನೂನು ಹೋರಾಟಕ್ಕೂ ಮುಂದಾಗಿದ್ದರು. ಅಲ್ಲದೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಲಾಗಿತ್ತು. ಇದೀಗ ಈ ನಡುವೆಯೇ ರಾಜ್ಯ ಸರ್ಕಾರವು ಶಿಕ್ಷಕರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಕಾನೂನು ಇಲಾಖೆ ಈ ಕುರಿತು ಸುಪ್ರೀಂಕೋರ್ಟ್‌ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಲು ಅನುಮೋದನೆ ನೀಡಿದ ಕಾರಣ ಈ ಕಾರಣಕ್ಕಾಗಿ ರಾಜ್ಯದ ಸಮಸ್ತ ಶಿಕ್ಷಕರಿಗಾದ ಅನ್ಯಾಯದ ಪರವಾಗಿ ಸರ್ಕಾರವೇ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಿದೆ. ಈ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ಮಾಹಿತಿಯನ್ನು ನೀಡಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ), ಬೆಂಗಳೂರು ಪರವಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ ಎಚ್ ಎಸ್, ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸಂಘ ಧನ್ಯವಾದಗಳನ್ನು ತಿಳಿಸಿದೆ ಎಂದಿದ್ದಾರೆ.
Comments are closed.