RCB: RCB ತಂಡಕ್ಕೆ ಹೊಸ ಕೋಚ್ ನೇಮಕ

RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಮುಖ್ಯ ಕೋಚ್ ಬದಲಾಗಿದ್ದಾರೆ. ಕಳೆದ ಬಾರಿ ಆರ್ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಲ್ಯೂಕ್ ವಿಲಿಯಮ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ, ಅವರ ಬದಲಿಗೆ ಮಲೋಲನ್ ರಂಗರಾಜನ್ ಅವರು ಹೊಸ ಕೋಚ್ ಆಗಿ ನೇಮಕವಾಗಿದ್ದಾರೆ.

ಮಲೋಲನ್ ರಂಗರಾಜನ್ ಈ ಹಿಂದೆ ಆರ್ಸಿಬಿ ಫ್ರಾಂಚೈಸಿಯ ಸ್ಕೌಟಿಂಗ್ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ನೆವಿಸ್ ಪ್ಯಾಟ್ರಿಯಾಟ್ಸ್ ತಂಡದ ಸಹಾಯಕ ಕೋಚ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಮುಖ್ಯ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.
ಇನ್ನು ಮಲೋಲನ್ ರಂಗರಾಜನ್ ಅವರೊಂದಿಗೆ ಇಂಗ್ಲೆಂಡ್‌ನ ಮಾಜಿ ವೇಗಿ ಅನ್ಯಾ ಶ್ರಬ್ಸೋಲ್ ಅವರು ಆರ್ಸಿಬಿ ತಂಡದ ಹೊಸ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.
Comments are closed.