Dharmasthala: ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ: ನ.15 ರಿಂದ 20ರವರೆಗೆ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಪೂರ

Share the Article

 

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವವು, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಲಕ್ಷದೀಪೋತ್ಸವದ ಪ್ರಮುಖ ಪ್ರದರ್ಶನ:

ನ. 15: ಬೆಳಗ್ಗೆ ಪ್ರೌಢ ಶಾಲಾ ಮೈದಾನದಲ್ಲಿ ರಾಜ್ಯ ಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ ದೊರೆಯಲಿದೆ. ಸಂಜೆ ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಗೆ ಭಕ್ತಿ ಭಜನೆಯ ಪಾದಯಾತ್ರೆ ನಡೆಯಲಿದೆ. ರಾತ್ರಿ ಶ್ರೀ ಮಂಜುನಾಥ ಸ್ವಾಮಿಗೆ ಹೊಸಕಟ್ಟೆ ಉತ್ಸವ ಜರುಗಲಿದೆ.

ನ. 16: ಕೆರೆಕಟ್ಟೆ ಉತ್ಸವ ಆಯೋಜಿಸಲಾಗಿದೆ.

ನ. 17: ಲಲಿತೋದ್ಯಾನ ಉತ್ಸವ ಹಾಗೂ ಅಮೃತವರ್ಷಿಣಿ ಸಭಾಭವನದಲ್ಲಿ ಲಲಿತಕಲಾಗೋಷ್ಠಿ ನಡೆಯಲಿದೆ.

ನ. 18: ಕಂಚಿಮಾರುಕಟ್ಟೆ ಉತ್ಸವದ ಜೊತೆಗೆ ಸರ್ವಧರ್ಮ ಸಮ್ಮೇಳನವು ಲಕ್ಷದೀಪೋತ್ಸವದ ಪ್ರಮುಖ ಆಕರ್ಷಣೆಯಾಗಿರಲಿದೆ.

ನ. 19: ಗೌರಿಮಾರುಕಟ್ಟೆ ಉತ್ಸವ ಹಾಗೂ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆನ.

20: ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆಯೊಂದಿಗೆ ಲಕ್ಷದೀಪೋತ್ಸವಕ್ಕೆ ತೆರೆ ಬೀಳಲಿದೆನ.

ಲಕ್ಷದೀಪೋತ್ಸವದ ಬಳಿಕ, ನವೆಂಬರ್ 23 ರಂದು ಮೇಳದ ಶ್ರೀ ಮಹಾಗಣಪತಿ ದೇವರ ದಿಗ್ವಿಜಯ ಯಾತ್ರೆಯು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮೇಳದ ಯಜಮಾನ ಡಿ. ಹರ್ಷೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಆರಂಭವಾಗಲಿದೆ.

Comments are closed.