Dharwad: ಸರಕಾರಿ ಸ್ಥಳಗಳಲ್ಲಿ ಸಂಘ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ: ಸರಕಾರದ ಆದೇಶಕ್ಕೆ ಹಿನ್ನಡೆ

Share the Article

Dharawad: ಸರಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರಕಾರದ ಅನುಮತಿ ಪಡೆಯಲು ರಾಜ್ಯ ಸರಕಾರ ಆದೇಶಕ್ಕೆ ಧಾರವಾಡ ವಿಭಾಗೀಯ ಪೀಠದಿಂದ ಹಿನ್ನಡೆಯಾಗಿದೆ.

ತನ್ನ ಆದೇಶಕ್ಕೆ ತಡೆ ನೀಡಿದ್ದ, ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದಲ್ಲಿ ಅರ್ಜಿ ಇತ್ಯರ್ಥ ಆಗುವವರೆಗೂ ಸರಕಾರದ ಆದೇಶಕ್ಕೆ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ. ಸರಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರಕಾರದ ಅನುಮತಿ ಪಡೆಯಬೇಕೆಂದು ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಸರಕಾರದ ಆದೇಶ ಪ್ರಶ್ನಿಸಿ ಪುನಶ್ಚೇತನ ಸೇವಾ ಸಂಸ್ಥೆ ಮತ್ತು ಇತರರು ಹೈಕೋರ್ಟ್‌ ಏಕಸದಸ್ಯ ಪೀಠಕ್ಕೆ ಹೋಗಿದ್ದರು. ಸರಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಏಕಸದಸ್ಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನೆ ಮಾಡಿ ದ್ವಿಸದಸ್ಯ ಪೀಠಕ್ಕೆ ಸರಕಾರ ಮೇಲ್ಮನವಿ ಸಲ್ಲಿಸಿತ್ತು.

ಇಂದು ಸರಕಾರದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಏಕಸದಸ್ಯ ಪೀಠದ ಆದೇಶ ಮುಂದುವರಿಕೆ ಮಾಡಿದೆ. ಏಕಸದಸ್ಯ ಪೀಠದಲ್ಲಿ ಅರ್ಜಿ ಇತ್ಯರ್ಥ ಆಗುವವರೆಗೂ ಸರಕಾರದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

Comments are closed.