Darshan: ‘ದರ್ಶನ್ ಜೈಲಿನಿಂದ ಖುಲಾಸೆಗೊಂಡು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ’: ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ


Darshan: ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ಸದ್ಯ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಅದೇನೆಂದರೆ ದರ್ಶನ್ ಗೆ ಜಾಮೀನು ಸಿಕ್ಕು ರೇಣುಕಾ ಸ್ವಾಮಿ ಕೊಲೆ ಪ್ರಕರಣದಿಂದ 2029ರಲ್ಲಿ ಖುಲಾಸೆಗೊಳ್ಳಲಿದ್ದಾರೆ. ಬಳಿಕ ಮಂಡ್ಯ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಟ್ವಿಟ್ ಮೂಲಕ ಹೇಳಿದ್ದಾರೆ.
ಸದ್ಯ ಈ ಟ್ವಿಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಆದಷ್ಟು ಬೇಗ ದರ್ಶನ್ ಹೊರಬರಲಿ ಎಂದು ಪ್ರಾರ್ಥಿಸುತ್ತಿರುವ ಅವರ ಅಭಿಮಾನಿಗಳು ಇದು ಸತ್ಯವಾಗಲಿ ಎಂದು ಕಮೆಂಟ್ ಮಾಡಿದ್ದಾರೆ.
Comments are closed.