RSS: ಚಿತ್ತಾಪುರದಲ್ಲಿ ʼRSS’ ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿ ಸಾಧ್ಯತೆ

Kalburgi: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಇಂದು ದಿನಾಂಕ ನಿಗದಿಯಾಗುವ ಸಾಧ್ಯತೆಯಿದೆ. ಹೀಗಾಗಿ ಹೈಕೋರ್ಟ್‌ನ ನಿರ್ಧಾರ ಏನಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ.

ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೋರಿ ಆರ್‌ಎಸ್‌ಎಸ್ ಅರ್ಜಿ ಸಲ್ಲಿಸಿದೆ. ಇಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ನಡೆಯಲಿದೆ. ನವೆಂಬರ್ 13 ಅಥವಾ 16 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಅನುಮತಿ ಕೇಳಲಾಗಿದ್ದು, ಕೋರ್ಟ್ ಪಥಸಂಚಲನಕ್ಕೆ ಅನುಮತಿ ನೀಡುತ್ತಾ? ಕಾದು ನೋಡಬೇಕು.
Comments are closed.