Share the Article

Dasara Holiday: ದಸರಾ ರಜೆಗಳನ್ನು ವಿಸ್ತರಣೆ ಮಾಡಿದ್ದರಿಂದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಮಾಡಿದೆ. ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಇನ್ನು ಮುಂದೆ 1 ಹೆಚ್ಚುವರಿ ಪೀರಿಯಡ್‌ ಪಾಠ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

Education Dept: ಜಾತಿ ಗಣತಿಗಾಗಿ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಸರ್ಕಾರ ಪ್ರಕಟಿಸಿದ್ದ ಸಾರ್ವಜನಿಕ ರಜೆಪಟ್ಟಿಗಿಂತಲೂ ಈ ಬಾರಿ ಹೆಚ್ಚಿನ ರಜೆ ಶಾಲಾ ಕಾಲೇಜುಗಳಿಗೆ ದೊರೆತು ಶೈಕ್ಷಣಿಕ ಕಾರ್ಯಗಳಲ್ಲಿ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ದಸರಾ ರಜೆ ಸರಿದೂಗಿಸಲು ಶಿಕ್ಷಣ ಇಲಾಖೆ ಮಾಸ್ಟರ್ ಪ್ಲಾನ್ ಹೆಣೆದಿದೆ.

ಹೌದು, ದಸರಾ ರಜೆ ವಿಸ್ತರಣೆಯಿಂದ ಕೊರತೆಯಾಗಿರುವ ಕಲಿಕಾ ಅವಧಿ ಸರಿದೂಗಿಸಲು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಳಿದಿರುವ ಶಾಲಾ ದಿನಗಳಲ್ಲಿ ನಿತ್ಯ ಒಂದು ಹೆಚ್ಚುವರಿ ಅವಧಿ ತರಗತಿ ಬೋಧನೆಗೆ ಶಿಕ್ಷಣ ಇಲಾಖೆ ಆದೇಶಿಸಿದೆ.

ದಸರಾ ರಜೆಗಳನ್ನು ವಿಸ್ತರಿಸಿದ್ದರಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕೊರತೆಯಾಗುವ ಶಾಲಾ ದಿನಗಳ ಬೋಧನಾ ಕಲಿಕೆ ಸರಿದೂಗಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.

Comments are closed.