Madhu Bangarappa: ಸರಕಾರಿ ಶಾಲೆಗೆ 12 ಸಾವಿರ, ಅನುದಾನಿತ ಶಾಲೆಗೆ 6 ಸಾವಿರ ಶಿಕ್ಷಕರ ನೇಮಕಾತಿ-ಮಧು ಬಂಗಾರಪ್ಪ

Share the Article

Madhu Bangarappa: ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6000 ಸೇರಿ 18000 ಶಿಕ್ಷಕರ ನೇಮಕಾತಿ ಶೀಘ್ರದಲ್ಲಿಯೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೇಳೂರು ಕುಸುಬೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತನಾಡಿದ ಸಚಿವರು, ಸರಕಾರಿ ಶಾಲೆಗಳನ್ನು ಬಲಪಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಅನೇಕ ಕಾರ್ಯಕ್ರಮ ರೂಪಿಸಿದೆ. ಈ ನಿಟ್ಟಿನಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ ಮಾಡಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 900 ಕೆಪಿಎಸ್‌ ಶಾಲೆ ಆರಂಭಿಸಲು ಮಂಜೂರಾತಿ ನೀಡಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ಸರಕಾರಿ ಶಾಲೆಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದ್ದು, ಹೊಸ ಕಟ್ಟಡ ನಿರ್ಮಾಣವು ಅಗತ್ಯವಿದ್ದ ಕಡೆಗಳನ್ನು ಮಾಡಲಾಗುತ್ತಿದೆ. ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ವಿಶೇಷ ತರಗತಿಗಳನ್ನು ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ ಎಂದು ಹೇಳಿದ್ದಾರೆ.

Comments are closed.