ರಾಜ್ಯ ಸರ್ಕಾರದಿಂದ 6ನೇ ಗ್ಯಾರಂಟಿಯಾಗಿ ‘ ಗೃಹ ಆರೋಗ್ಯ’ ಯೋಜನೆ – ಇನ್ನು ಜನರಿಗೆ ಉಚಿತ ಚಿಕಿತ್ಸೆ

Share the Article

6th Guarantee: ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುವಾಗ ಪಂಚರ್ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಅಂತೆಯೇ ಅಧಿಕಾರಕ್ಕೆ ಬಂದ ಬಳಿಕ ಅಷ್ಟು ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ನೆರವಾಗುತ್ತಿದೆ. ಇದೀಗ ಆರನೇ ಗ್ಯಾರೆಂಟಿ ಯೋಜನೆಯಾಗಿ ‘ಗೃಹ ಆರೋಗ್ಯ’ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಮಾಹಿತಿ ನೀಡಿದೆ.

ಹೌದು, ಗ್ರಾಮೀಣ ಭಾಗದ 30 ವರ್ಷ ಮೇಲ್ಪಟ್ಟವರ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧಿ ವಿತರಿಸುವ ‘ಗೃಹ ಆರೋಗ್ಯ’ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ರಾಜ್ಯಾದ್ಯಂತ ರಕ್ತದೊತ್ತಡ, ಮಧುಮೇಹಕ್ಕೆ 5 ಲಕ್ಷಕ್ಕೂ ಹೆಚ್ಚು ಜನ ಉಚಿತ ಔಷಧ ಪಡೆಯುತ್ತಿದ್ದಾರೆ.

ಆ ಮೂಲಕ ಹೃದಯಾಘಾತ, ಕಿಡ್ನಿ ವೈಫಲ್ಯ, ಸ್ಟ್ರೋಕ್‌ನಂತಹ ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಗಳಿಗೆ ಮೂಲದಲ್ಲೇ ಚಿಕಿತ್ಸೆ ಪಡೆಯುತ್ತಿದ್ದು, ‘ಗೃಹ ಆರೋಗ್ಯ’ ರಾಜ್ಯ ಸರ್ಕಾರದ ಆರನೇ ಗ್ಯಾರಂಟಿಯಾಗಿ ಬದಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಜೊತೆಗೆ ಸುಮಾರು 185 ಕೋಟಿ ವೆಚ್ಚದ ‘ಗೃಹ ಆರೋಗ್ಯ’ ಯೋಜನೆಯಡಿ ರಕ್ತದೊತ್ತಡ, ಡಯಾಬಿಟಿಸ್ ರೋಗಿಗಳಿಗೆ ನಿರಂತರವಾಗಿ ಉಚಿತ ಔಷಧಿ ಒದಗಿಸಲು ಈಗಾಗಲೇ 115 ಕೋಟಿ ಮೌಲ್ಯದ ಔಷಧಿಗಳ ಖರೀದಿ ಪ್ರಕ್ರೀಯೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments are closed.