D K Shivkumar : 2028 ರ ವರೆಗೆ ಸಿದ್ದರಾಮಯ್ಯನೇ ರಾಜ್ಯದ ಸಿಎಂ – ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

Share the Article

D K Shivkumar : ತಾವು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. 2028 ರವರೆಗೆ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಡಿಕೆ ಶಿವಕುಮಾರ್ ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

2028 ರಲ್ಲಿ ಸಿದ್ದರಾಮಯ್ಯ ಅವರ ಐದು ವರ್ಷಗಳ ಅವಧಿ ಪೂರ್ಣಗೊಂಡ ನಂತರ ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂಬ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರು ಸ್ಟೇಟ್ಮೆಂಟ್ ಒಂದನ್ನು ನೀಡಿದ್ದರು. ಈ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು2028 ರವರೆಗೆ ಸಿದ್ದರಾಮಯ್ಯ (Siddaramaiah) ಸಿಎಂ ಆಗಿರುತ್ತಾರೆ. ಅವ್ರೇ ಸಿಎಂ ಆಗಿ ಮುಂದುವರೆದರೆ ಏನ್ ತಪ್ಪು’ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುರ್ಚಿ ಕದನಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟಿದ್ದಾರೆ.

ಅಲ್ಲದೆ ‘2028 ರವರೆಗೆ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. 2028ರವರೆಗೆ ಸಿದ್ದರಾಮಯ್ಯ ಸಿಎಂ ಆಗಿದ್ರೆ ಸಂತೋಷ.. ನಾನು ಯಾವುದೇ ಕಾರಣಕ್ಕೂ ಬೇಜಾರು ಮಾಡಿಕೊಳ್ಳೋದಿಲ್ಲ. ನಾವು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ’ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Comments are closed.