ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿಎಸ್‌ವೈಗೆ ಶಾಕಿಂಗ್ ನ್ಯೂಸ್

BS Yediyurappa: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಶಾಕಿಂಗ್ ನ್ಯೂಸ್ ಎದುರಾಗಿದೆ. ಅವರಿಗೆ ತ್ವರಿತ ನ್ಯಾಯಾಲಯವು ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ನ್ಯಾ.ಎಂಐ ಅರುಣ್ ಅವರಿದ್ದ ಪೀಠ ಈ ಆದೇಶವನ್ನು ಹೊರಡಿಸಿದೆ.

ಕಾಗ್ನಿಜೆನ್ ಪಡೆದು ಸಮನ್ಸ್ ನೀಡಿದ ಕ್ರಮ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ ಮಾಡಿದೆ. ಅಗತ್ಯವಿಲ್ಲದಿದ್ದಾಗ ಖುದ್ದು ಹಾಜರಿಯಿಂದ ವಿನಾಯಿತಿಗೆ ಹೈಕೋರ್ಟ್ ಸೂಚನೆ ನೀಡಿದೆ. ಬಿಎಸ್‌ವೈ ಖುದ್ದು ಹಾಜರಾತಿಯಿಂದ ವಿನಾಯಿತಿಗೆ ಅರ್ಜಿ ಸಲ್ಲಿಸಬಹುದು. ಈ ಮನವಿಯನ್ನು ಪರಿಗಣಿಸಲು ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.
ಫೆ.18 ರಂದು ತ್ವರಿತ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ. ಈಗ ದಿನಾಂಕ ನಿಗದಿ ಮಾಡಿ ತ್ವರಿತ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.
Comments are closed.