Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಇನ್ನಿಲ್ಲ

Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ಇಂದು ಶುಕ್ರವಾರ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆ ಹಾಗೂ ಉಸಿರಾಟದ ತೊಂದರೆಯಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದಾರೆ.ನಾಡಿನಾದ್ಯಂತ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರು ತಿಮ್ಮಕ್ಕ ಅವರ ಅಗಲಿಕೆಗೆ ಕಣ್ಣೀರು ಸುರಿಸಿದ್ದಾರೆ. ಸಕಲ ಸರ್ಕಾರಿ ಗೌರವದೊಂದಿಗೆ ತಿಮ್ಮಕ್ಕ ಅವರ ಅಂತಿಮ ವಿಧಿವಿಧಾನಗಳು ನಡೆಯಲಿವೆ.

Comments are closed.