Karnataka Gvt :ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆ – ಇಂದು ಶಾಲಾ, ಕಾಲೇಜುಗಳಿಗೆ ರಜೆ ಇದೆಯಾ?

Karnataka Gvt : ಪದ್ಮಶ್ರೀ ಪುರಸ್ಕೃತ ರಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನಿಧನದ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇದೆಯೇ? ಎಂಬುದು ಗೊಂದಲದ ವಿಚಾರವಾಗಿದೆ. ಆದರೆ ಈ ಕುರಿತು ಸರ್ಕಾರ ತಾನು ಯಾವುದೇ ರಜೆಯನ್ನು ಘೋಷಿಸಿಲ್ಲ ಎಂಬುದಾಗಿ ಹೇಳಿಕೊಂಡಿದೆ.

ಹೌದು, ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ಸಾಲು ಮರದ ತಿಮ್ಮಕ್ಕ ಅವರ ನಿಧನದ ಕಾರಣದಿಂದಾಗಿ ಸರ್ಕಾರಿ ರಜೆ ಘೋಷಿಸಲಾಗಿದೆ ಎನ್ನುವಂತ ಆದೇಶ ಪತ್ರವೊಂದು ವೈರಲ್ ಆಗಿತ್ತು. ಆದರೆ ಇನ್ನೂ ಆದರೇ ಇದು ಎಸ್ ಎಂ ಕೃಷ್ಣ ಅವರು ಮರಣ ಹೊಂದಿದ ಆದೇಶವನ್ನು ತಿರುಚಿ ಹಾಕಲಾಗಿದೆ ಎನ್ನಲಾಗಿದೆ. ಹೀಗಾಗಿ ರಾಜ್ಯಾಧ್ಯಂತ ಸರ್ಕಾರಿ ರಜೆ ಇರುವುದಿಲ್ಲ. ಕೇವಲ ಸರ್ಕಾರಿ ಗೌರವಗಳೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಗೆ ಆದೇಶಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಸ್ಪಷ್ಟ ಪಡಿಸಿದೆ.
ಸರ್ಕಾರದ ಆದೇಶದಲ್ಲೇನಿದೆ?
ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರವು ಆದೇಶಿಸಿದೆ. ಆದರೇ ನಾಳೆ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಘೋಷಿಸಿಲ್ಲ ಎಂಬುದಾಗಿ ಸರ್ಕಾರ ತಿಳಿಸಿದೆ.

Comments are closed.