ಪಂಜಾಬ್‌: ಯುವಕನಿಗೆ ಡ್ರಾಪ್‌ ಕೊಡುವ ನೆಪದಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ ಯುವತಿಯರು

Share the Article

Punjab: ನಾಲ್ವರು ಯುವತಿಯರು ಯುವಕನನ್ನ ಅಪಹರಣ ಮಾಡಿ ಅತ್ಯಾಚಾರ ಮಾಡಿದ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಡ್ರಾಪ್‌ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದುಕೊಂಡು ಹೋಗಿದ್ದು, ನಂತರ ಆತನ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ.

ಈ ಘಟನೆ ಪಂಜಾಬ್‌ನ ಜಲಂದರ್‌ನಲ್ಲಿ ಈ ಘಟನೆ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ನಾಲ್ವರು ಯುವತಿಯರು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನನ್ನು ಬಲವಂತವಾಗಿ ಕಾರಿನಲ್ಲಿ ಅಪಹರಣ ಮಾಡಿ ಒಂದು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ನಂತರ ಅವರು ಅವನನ್ನು ರಸ್ತೆಯಲ್ಲಿ ಬಿಟ್ಟು ಹೊರಟು ಹೋಗಿದ್ದಾರೆ.

ಕೂಡಲೇ ಸಂತ್ರಸ್ತ ಯುವಕ ಪೊಲೀಸರಿಗೆ ದೂರನ್ನು ನೀಡಿದ್ದಾರೆ.

ಈ ಸುದ್ದಿ ವೈರಲ್‌ ಆಗಿದ್ದು, ಪುರುಷರಿಗೆ ಅನ್ಯಾಯವಾದರೆ, ಯಾರೂ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಮಹಿಳೆಯರಿಗೆ ಈ ರೀತಿ ಸಂಭವಿಸಿದರೆ ತಕ್ಷಣವೇ ಕ್ರಮ ಕೈಗೊಳ್ಳುತ್ತಾರೆ ಎಂದು ನೆಟ್ಟಿಗರು ಕಾಮೆಂಟ್‌ಗಳಲ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದಾರೆ.

ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ನಡೆಸುತ್ತಿದ್ದಾರೆ.

Comments are closed.