Bengaluru: ಹಾವು, ನಾಯಿ ಕಡಿತಕ್ಕೆ ಮುಂಗಡ ಹಣ ಕೇಳದೆ ಚಿಕಿತ್ಸೆ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಆದೇಶ

Share the Article

Bengaluru: ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯವಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಆ್ಯಂಟಿ ರೇಬೀಸ್ ಲಸಿಕೆಗಳು ಮತ್ತು ರೇಬೀಸ್ ಇಮ್ಯುನೊಗ್ಲೋಬುಲಿನ್‌ಗಳ ಸಂಗ್ರಹ ಹೊಂದಿರಬೇಕು. ನಾಯಿ, ಹಾವು ಸೇರಿದಂತೆ ಇತರ ಪ್ರಾಣಿಗಳು ಕಚ್ಚಿದವರಿಗೆ ಉಚಿತ ಪ್ರಾಥಮಿಕ ತಪಾಸಣೆ ಹಾಗೂ ಪ್ರಥಮ ಚಿಕಿತ್ಸೆ ಕಡ್ಡಾಯ ನೀಡಬೇಕು. ಯಾವುದೇ ಆಸ್ಪತ್ರೆ ಮುಂಗಡ ಹಣ ಕೇಳದೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Comments are closed.