Bomb Threat: ತಮಿಳುನಾಡು ಸಿಎಂ ಸ್ಟಾಲಿನ್ ಸೇರಿ ಸ್ಟಾರ್ ನಟ, ನಟಿಯರಿಗೆ ಬಾಂಬ್ ಬೆದರಿಕೆ

Bomb Threat: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ (MK Stalin) ಸೇರಿದಂತೆ ಸ್ಟಾರ್ ನಟ, ನಟಿಯರ ನಿವಾಸವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ (Bomb Threat) ಬಂದಿದೆ.ಭಾನುವಾರ (ನ.16) ರಾತ್ರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಮೇಲ್ ಬಂದಿದ್ದು, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಕಚೇರಿ ಹಾಗೂ ನಟರಾದ ಅಜಿತ್ ಕುಮಾರ್, ಅರವಿಂದ್ ಸ್ವಾಮಿ ಮತ್ತು ನಟಿ ಖುಷ್ಬು ಅವರ ನಿವಾಸದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಬಂದಿದೆ. ಕೂಡಲೇ ನಾಲ್ಕು ಸ್ಥಳದಲ್ಲಿ ಪರಿಶೀಲನೆ ನಡೆಸಲಾಗಿದೆ. ಇದಕ್ಕೂ ಮುನ್ನ ಚೆನ್ನೈನ ಇಂಜಂಬಕ್ಕಂನಲ್ಲಿರುವ ಅಜಿತ್ ಕುಮಾರ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಬಂದಿತ್ತು. ಈ ವೇಳೆ ಅಧಿಕಾರಿಗಳು ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಪೂರ್ಣವಾಗಿ ತಪಾಸಣೆ ನಡೆಸಿದರು. ಆದರೆ ಯಾವುದೇ ಸ್ಫೋಟಕಗಳು ಕಂಡುಬಂದಿಲ್ಲ.ಇನ್ನೂ ನಟ ಅರುಣ್ ವಿಜಯ್ ಅವರ ಎಕ್ಕಾಟ್ಟುತಂಗಲ್ ನಿವಾಸದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಬಳಿಕ ಪೊಲೀಸರು ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ ನಡೆಸಿದಾಗ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ.

Comments are closed.