

Bihar: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.ಇತ್ತೀಚೆಗೆ ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದು, ನ. 14 ರಂದು ಫಲಿತಾಂಶ ಪ್ರಕಟವಾಗಿತ್ತು. ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಗಳಿಸಿತ್ತು.ಇದೇ ನವೆಂಬರ್ 20ರಂದು ನೂತನ ಸಿಎಂ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ಇದೀಗ ತಮ್ಮ ಸರ್ಕಾರದ ಅಂತಿಮ ಸಚಿವ ಸಂಪುಟ ಸಭೆಯ ನಂತರ ರಾಜಭವನದಲ್ಲಿ ನಿತೀಶ್ ಕುಮಾರ್ ರಾಜ್ಯಪಾಲರಿಗೆ ರಾಜೀನಾಮೆ ಸಲಿಸಿದಾರೆ.ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ನ. 19 ರಂದು ವಿಧಾನಸಭೆ ವಿಸರ್ಜನೆಗೊಳ್ಳಲಿದೆ.













