BMRCL: ನಮ್ಮ ಮೆಟ್ರೋ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ: ಪ್ರಯಾಣಿಕರಿಗೆ ಹೈ ಅಲರ್ಟ್

BMRCL: ಬೆಂಗಳೂರಿನ (Bengaluru) ನಮ್ಮ ಮೆಟ್ರೋಗೆ (Namma Metro) ಅಪರಿಚಿತ ದುಷ್ಕರ್ಮಿಯೊಬ್ಬ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಹಾಕಿರುವ ಘಟನೆ ನಡೆದಿದೆ. ಈ ಕುರಿತು ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಬಿಎಂಆರ್‌ಸಿಎಲ್ ಗೆ ಅಪರಿಚಿತ ವ್ಯಕ್ತಿಯೊಬ್ಬ ಇ-ಮೇಲ್ ಸಂದೇಶ ರವಾನಿಸಿದ್ದು, ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಗೆ ಬಿಎಂಆರ್ ಸಿಎಲ್ ದೂರು ನೀಡಿದೆ. ನವೆಂಬರ್ 14 ರ ರಾತ್ರಿ 11:30ಕ್ಕೆ ಇ-ಮೇಲ್ ಬೆದರಿಕೆ ಸಂದೇಶ ಬಂದಿದೆ ಎನ್ನಲಾಗಿದೆ. ಇ-ಮೇಲ್ ಪರಿಶೀಲನೆ ನಡೆಸಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ನನ್ನ ವಿಚ್ಛೇದಿತ ಪತ್ನಿಗೆ ಮೆಟ್ರೋ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ. ನಿಮ್ಮಮೆಟ್ರೋ ನಿಲ್ದಾಣ ಸ್ಪೋಟ ಮಾಡಬೇಕಾಗುತ್ತದೆ. ನಾನು ಒಬ್ಬ ಉಗ್ರಗಾಮಿ ಇದ್ದಂತೆ, ಎಂದು ವ್ಯಕ್ತಿ ಸಂದೇಶ ಕಳುಹಿಸಿದ್ದಾನೆ.ಮೇಲ್ನೋಟಕ್ಕೆ ಇದೊಂದು ಹುಸಿ ಬೆದರಿಕೆ ಇರಬಹುದೆಂದು ಕಂಡುಬಂದಿದ್ದರೂ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ನಿಗಾ ವಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪರಿಚಿತ ವ್ಯಕ್ತಿಗಾಗಿ ಶೋಧ ನಡೆಸುತ್ತಿದ್ದಾರೆ.

Comments are closed.